Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿತ್ರದುರ್ಗ : ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಅಪಘಾತದ ಹಲವು ಭಯಾನಕ ವೀಡಿಯೋಗಳು ವೈರಲ್ ಆಗುತ್ತಿದೆ.
ಬಸ್ ನಲ್ಲಿ ಸಿಲುಕಿದ್ದ ಇಬ್ಬರು ಯುವತಿಯರು ಕಿಟಕಿಯಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರು ಬೆಂಕಿಯಲ್ಲಿ ಸಿಲುಕಿದ್ದಾರೆ. ತಮ್ಮ ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಜಿಗಿದಿದ್ದಾರೆ.