Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕರ್ನಾಟಕದೆಲ್ಲೆಡೆ ತಂಪಾದ ವಾತಾವರಣವಿದೆ. ಬೆಳಿಗ್ಗೆಯಾದರೆ ದಟ್ಟ ಮಂಜು, ಮಧ್ಯಾಹ್ನವಾದರೂ ಕಣ್ಣಿಗೆ ಕಾಣದ ಸೂರ್ಯ, ಸಂಜೆಯಾದರೆ ಮೈನಡುಗುವ ಚಳಿಗೆ ರಾಜ್ಯದ ಜನ ತತ್ತರಿಸಿದ್ದಾರೆ. ಇನ್ನು ಕೂಲ್ ಸಿಟಿ ಬೆಂಗಳೂರು ಕೂಡ ಅಕ್ಷರಶಃ ಮಂಜುಗಡ್ಡೆಯಂತೆ ತಣ್ಣಗಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಚಳಿ ವಾಡಿಕೆಗಿಂತ ಹೆಚ್ಚೇ ಇದೆ.
ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
https://www.newsics.com/2025/12/27/court-fines-businessman-rs-5000-for-feeding-pigeons/