newsics.com
ಅಮರಾವತಿ(ಆಂಧ್ರಪ್ರದೇಶ): ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನಲ್ಲಿರುವ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಸ್ನಾನಗೃಹದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.
ಜನ್ಮ ನೀಡಿದ ಬೆನ್ನಲ್ಲಿಯೇ ಗಂಡು ಮಗು ಸಾವು ಕಂಡಿದೆ. ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ಓದುತ್ತಿರುವ ವಿದ್ಯಾರ್ಥಿನಿ ಕಳೆದ ಎರಡು ತಿಂಗಳಿನಿಂದ ಹಾಸ್ಟೆಲ್‌ನಲ್ಲಿ ವಾಸ ಮಾಡುತ್ತಿದ್ದಳು.
ಅತಿಯಾದ ಹೊಟ್ಟೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸ್ನಾನಗೃಹಕ್ಕೆ ಹೋಗುವುದಾಗಿ ತಿಳಿಸಿದ್ದಳು. ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಎಷ್ಟು ಹೊತ್ತಾದರೂ ಆಕೆ ಸ್ನಾನಗೃಹದಿಂದ ವಾಪಸ್ ಬರದ ಕಾರಣ, ಆಕೆಯ ಸಹಪಾಠಿಗಳು ಶಿಕ್ಷಕರಿಗೆ ಈ ಬಗ್ಗೆ ತಿಳಿಸಿದ್ದರು.
ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂದು ಶಾಲಾ ಅಧಿಕಾರಿಗಳು ಹೇಳಿದ್ದಾರೆ.
ವಿದ್ಯಾರ್ಥಿನಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಒಂಗೋಲ್‌ನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ಕಾಲೇಜು ವಾಶ್ ರೂಂನಲ್ಲಿ ಹದಿನಾರರ ಹರೆಯದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಕೋತಪಟ್ಟಣಂ ಸರ್ಕಲ್ ಇನ್ಸ್‌ಪೆಕ್ಟರ್ ಜಗದೀಶ್ ಹೇಳಿದ್ದಾರೆ.
ಟಿವಿ ಲೈವ್‌ನಲ್ಲೇ ನಟ ರಾಜ್ ತರುಣ್ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ
BJP-JDS ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ