Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಂಟಕವಾಯ್ತಾ ಮಸಾಜ್ ಪಾರ್ಲರ್ ಕೆಲಸ?; ಮೂರನೇ ಸಂಸಾರದಲ್ಲೂ ಸಿಗದ ಸುಖ
ಕರ್ನಾಟಕಪ್ರಮುಖ

ಕಂಟಕವಾಯ್ತಾ ಮಸಾಜ್ ಪಾರ್ಲರ್ ಕೆಲಸ?; ಮೂರನೇ ಸಂಸಾರದಲ್ಲೂ ಸಿಗದ ಸುಖ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪತಿಯೇ ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ.

ಕೊಲೆಯಾದ ಮಹಿಳೆಯನ್ನು ಆಯೇಷಾ ಸಿದ್ದಿಕಿ (39) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಆಕೆಯ ಪತಿ ಸೈಯ್ಯದ್ ಜಬಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸೈಯ್ಯದ್ ಜಬಿಗೆ ಆಯೇಷಾ ಸಿದ್ದಿಕಿ ಎರಡನೇ ಪತ್ನಿಯಾಗಿದ್ದು, ಆಯೇಷಾಗೆ ಆತ ಮೂರನೇ ಪತಿಯಾಗಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ದಾಂಪತ್ಯ ಜೀವನದಲ್ಲಿ ಹಲವು ದಿನಗಳಿಂದ ಅಸಮಾಧಾನ ಮತ್ತು ಅನುಮಾನಗಳು ಮನೆಮಾಡಿದ್ದವು ಎಂಬುದೂ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.
ಆಯೇಷಾ ಸಿದ್ದಿಕಿ ಮಸಾಜ್ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವಿಷಯವೇ ಪತಿ-ಪತ್ನಿಯ ನಡುವಿನ ಪ್ರಮುಖ ಕಲಹಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಪತಿ ಸೈಯ್ಯದ್ ಜಬಿ, ಪತ್ನಿಗೆ ಮಸಾಜ್ ಪಾರ್ಲರ್ ಕೆಲಸವನ್ನು ಬಿಡುವಂತೆ ಹಲವು ಬಾರಿ ಸೂಚಿಸಿದ್ದಾನೆ. ಆದರೆ ಆಯೇಷಾ ಅದನ್ನು ಒಪ್ಪದೆ ಮುಂದುವರೆದಿದ್ದಾಳೆ ಎನ್ನಲಾಗಿದೆ. ಇದೇ ವಿಚಾರವಾಗಿ ಆಗಾಗ್ಗೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಕೂಡ ಇದೇ ವಿಷಯಕ್ಕೆ ಸಂಬಂಧಿಸಿ ಪತಿ-ಪತ್ನಿಯ ನಡುವೆ ತೀವ್ರ ವಾಗ್ವಾದ ನಡೆದಿದೆ. ವಾಗ್ವಾದವು ಕ್ಷಣಾರ್ಧದಲ್ಲಿ ಗಲಾಟೆಯಾಗಿ, ಆಕ್ರೋಶಕ್ಕೆ ಒಳಗಾದ ಸೈಯ್ಯದ್ ಜಬಿ, ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಪತ್ನಿಯ ಕುತ್ತಿಗೆಗೆ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಕುತ್ತಿಗೆ ಸೀಳಿ ರಕ್ತಸ್ರಾವದಿಂದ ಆಯೇಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಅಗ್ರಹಾರ ಲೇಔಟ್ನಲ್ಲಿ ನಡೆದಿದ್ದು, ಶಬ್ದ ಕೇಳಿ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿದಾಗಲೇ ಆಯೇಷಾ ಜೀವ ಕಳೆದುಕೊಂಡಿದ್ದಾಳೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಘಟನೆಯ ನಂತರ ಆತಂಕಗೊಂಡ ಆರೋಪಿ, ಯಾವುದೇ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡದೇ ನೇರವಾಗಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ತೆರಳಿ ತನ್ನ ಅಪರಾಧವನ್ನು ಒಪ್ಪಿಕೊಂಡು ಶರಣಾಗಿದ್ದಾನೆ.

ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಕೃತ್ಯದ ಹಿಂದೆ ನಿಖರ ಕಾರಣ, ದಾಂಪತ್ಯ ಹಿನ್ನೆಲೆ, ಹಿಂದಿನ ಜಗಳಗಳು ಹಾಗೂ ಮಾನಸಿಕ ಸ್ಥಿತಿಯ ಬಗ್ಗೆ ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಈ ಘಟನೆ ಗೃಹ ಕಲಹಗಳು, ಅನುಮಾನ, ಆಕ್ರೋಶ ಮತ್ತು ಸಂವಹನದ ಕೊರತೆ ಹೇಗೆ ಅಪರಾಧಕ್ಕೆ ದಾರಿ ಮಾಡಿಕೊಡುತ್ತವೆ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ. ಸಣ್ಣ ವಿವಾದಗಳು ಕಾಲಕ್ರಮೇಣ ದೊಡ್ಡ ಹಿಂಸಾಚಾರಕ್ಕೆ ತಿರುಗತ್ತದೆ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌

TAGGED:A massage parlor job with a sore throat?; A happiness that cannot be found even in the third marriage:
Share This Article
Facebook Twitter Copy Link Print
Previous Article ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌
Next Article Gold Rate ಆಭರಣ ಪ್ರಿಯರಿಗೆ ಬಿಗ್‌ ಶಾಕ್‌; ಇಂದಿನ ಚಿನ್ನದ ಬೆಲೆ ಎಷ್ಟು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?