Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಬಹಳ ಹಿಂದೆಯೇ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಇದೀಗ ಚಿತ್ರತಂಡದಿಂದ ಹುಮಾ ಖುರೇಷಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.
2026ರ ಮಾರ್ಚ್ 19ರಂದು ತೆರೆಕಾಣಲಿರುವ ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿದೆ.ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹೆಸರಿಗೆ ತಕ್ಕಂತೆಯೇ ಈ ಪಾತ್ರ ಸಖತ್ ರಿಚ್ ಆಗಿರಲಿದೆ. ರೆಟ್ರೋ ಕಾಲದ ಐಷಾರಾಮಿ ಕಾರಿನ ಎದುರಿನಲ್ಲಿ ಗ್ಲಾಮರಸ್ ಡ್ರೆಸ್ ಧರಿಸಿ ನಿಂತಿರುವ ಹುಮಾ ಖುರೇಷಿ ಅವರ ಲುಕ್ ಗಮನ ಸೆಳೆಯುತ್ತಿದೆ. ಇದನ್ನು ನೋಡಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.
https://www.instagram.com/p/DSy6K5Kj27w/?igsh=MTExM2hrdnljdjh4cA==