Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiraadi Ghat ಶಿರಾಡಿಘಾಟ್‌ ಮಾರ್ಗದಲ್ಲಿ ರೈಲ್ವೆ ವಿದ್ಯುದೀಕರಣ ಪೂರ್ಣ: ಪ್ರಾಯೋಗಿಕ ಚಾಲನೆ ಯಶಸ್ವಿ
ಕರ್ನಾಟಕದೇಶಪ್ರಮುಖ

Shiraadi Ghat ಶಿರಾಡಿಘಾಟ್‌ ಮಾರ್ಗದಲ್ಲಿ ರೈಲ್ವೆ ವಿದ್ಯುದೀಕರಣ ಪೂರ್ಣ: ಪ್ರಾಯೋಗಿಕ ಚಾಲನೆ ಯಶಸ್ವಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಂಟ್ವಾಳ (ದಕ್ಷಿಣ ಕನ್ನಡ): ನೈಋತ್ಯ ರೈಲ್ವೆ ಮೈಸೂರು ವಿಭಾಗ ಡಿ.28ರಂದು ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಈ ಮೂಲಕ ಘಾಟ್ ವಿಭಾಗದ ಸಂಪೂರ್ಣ ವಿದ್ಯುದೀಕರಣ ಮಾಡುವಲ್ಲಿ ಯಶ ಸಾಧಿಸಿದೆ.

ಇದು ಈ ಪ್ರದೇಶದ ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ.
ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಲೋ ಮೀಟರ್ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ.

ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ತೀಕ್ಷ್ಣ ವಕ್ರಗಳು ಇರುವುದರ ಜತೆಗೆ, ಭೂಕುಸಿತಗಳಿಗೆ ಹೆಚ್ಚು ಒಳಪಡುವ ಪ್ರದೇಶವಾಗಿರುವುದರಿಂದ, ವಿದ್ಯುದೀಕರಣ ಕಾರ್ಯವು ಅತ್ಯಂತ ಸಂಕೀರ್ಣವಾಗಿತ್ತು.
ವಿದ್ಯುದೀಕರಣ ಕಾರ್ಯವು 2023ರ ಡಿ.1ರಂದು ಆರಂಭಗೊಂಡು, ₹93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ಯೋಜನೆಯಡಿ ಮಾರ್ಗದೊಳಗೆ ಐದು ಸ್ವಿಚಿಂಗ್ ಸ್ಟೇಷನ್ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ.

ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿ.ಮೀ. ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್‌ಗೆ ಮಿತಿಗೊಳಿಸಲಾಗಿದೆ.
ಈ ವಿಭಾಗದಲ್ಲಿರುವ 57 ಸುರಂಗಗಳಲ್ಲಿ, ಮೇಲ್ಮೈ ವಿದ್ಯುತ್ ಸಾಧನಗಳ ಅಳವಡಿಕೆಗೆ 419 ಮುಖ್ಯ ಬ್ರಾಕೆಟ್‌ಗಳು ಮತ್ತು 419 ಹೆಚ್ಚುವರಿ (ಸ್ಪೇರ್) ಬ್ರಾಕೆಟ್‌ಗಳನ್ನು ಒದಗಿಸಲಾಗಿದೆ.

ಸುರಂಗಗಳ ಲೈನ್ಡ್ ಹಾಗೂ ಅನ್ಲೈನ್ಡ್ ಭಾಗಗಳಿಗೆ ಸಂಬಂಧಿಸಿದಂತೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಸವಿಸ್ತಾರವಾದ ಭೌಗೋಳಿಕ ಸಮೀಕ್ಷೆಗಳನ್ನು ನಡೆಸಲಾಗಿದೆ.

ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್

ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ; ಘರ್ಷಣೆಗೆ ಕಾರಣವಾಗಿದ್ದೇನು?

TAGGED:Electrification of railways on Shiradighat route complete: trial run successful
Share This Article
Facebook Twitter Copy Link Print
Previous Article ಸಾಂಬಾರ್‌ನಲ್ಲಿ ಉಪ್ಪು ಹೆಚ್ಚಾಯಿತೇ?; ಈ ರೀತಿ ಮಾಡಿದ್ರೆ ಸಾಕು
Next Article Divorce ಮುಗಿಯದ ನಿತ್ಯ ಜಗಳ… ಮತ್ತೋರ್ವ ಕ್ರಿಕೆಟಿಗನ 6 ವರ್ಷಗಳ ದಾಂಪತ್ಯ ಅಂತ್ಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?