Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದುಬೈ ಕನ್ನಡಿಗರ ಭಾಷಾ ಪ್ರೇಮವನ್ನು ಕೊಂಡಾಡಿದ್ದಾರೆ. ದುಬೈನಲ್ಲಿ ನೆಲೆಸಿರುವ ಭಾರತೀಯ ಅನಿವಾಸಿ ಭಾರತೀಯರು ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದುಬೈನಲ್ಲಿ ನೆಲೆಸಿರುವ ಕನ್ನಡಿಗರು ತಮ್ಮಲ್ಲಿಯೇ ಒಂದು ಪ್ರಶ್ನೆ ಕೇಳಿಕೊಂಡರು. ತಂತ್ರಜ್ಞಾನ ಜಗತ್ತಿನಲ್ಲಿ ಬೆಳೆಯುತ್ತಿರುವ ತಮ್ಮ ಮಕ್ಕಳು ನೆಲದ ಭಾಷೆಯಿಂದ ದೂರವಾಗುತ್ತಿದ್ದಾರೆ ಎಂದು ಆಲೋಚಿಸಿದ ಅವರು ಕನ್ನಡ ಪಾಠಶಾಲೆ ಆರಂಭಿಸಿದ್ದಾರೆ. ಈ ಕನ್ನಡ ಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಓದು ಬರಹ ಕಲಿಸಲಾಗುತ್ತಿದೆ.
ಒಂದು ಸಾವಿರ ಮಕ್ಕಳಿಗೆ ಕನ್ನಡ ಕಲಿಸುತ್ತಿದ್ದು ದುಬೈನಲ್ಲಿರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ. ಕನ್ನಡ ನಾಡು ನುಡಿ ನಮ್ಮ ಹೆಮ್ಮೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಶ್ಲಾಘನೀಯ ಪ್ರಯತ್ನವನ್ನು ಕೊಂಡಾಡಿದ್ದಾಗಿ ತಿಳಿಸಿದ್ದಾರೆ.