newsics.com
ಯಾದಗಿರಿ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ಶುಕ್ರವಾರ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ದಲಿತ ಸಂಘಟನೆಗಳು ಆಗ್ರಹಿಸಿವೆ.
ಪರಶುರಾಮ್ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!
ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು
ಟಿವಿ ಲೈವ್‌ನಲ್ಲೇ ನಟ ರಾಜ್ ತರುಣ್ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ