Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಹೊಸ ವರ್ಷಾಚರಣೆ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.
https://www.newsics.com/2025/12/31/salary-hike-for-all-of-them-from-tomorrow/