newsics.com
ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ. ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಂಟುನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.