Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಬೆಂಗಳೂರು ಹಾಗೂ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿಸ್ತರಣೆ ಮಾಡಬೇಕು ಎನ್ನುವ ಮನವಿ ಇದೆ. ಇದೀಗ ಬೆಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಕೊಡುವ ಬಗ್ಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಗುಡ್ನ್ಯೂಸ್ ಕೊಟ್ಟಿದೆ.
ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ ಎಂಬ ಸುಳಿವು ನೀಡಿದ್ದಾರೆ.
ಇದೀಗ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುವ ಜನರಿಗೆ ಇದು ಆಶಾಭಾವನೆಯನ್ನು ಮೂಡಿಸಿದೆ. ವಂದೇ ಭಾರತ್ ಸೇವೆಯನ್ನು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ಇದು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲೂ ಸಚಿವ ವಿ. ಸೋಮಣ್ಣ ಹಂಚಿಕೊಂಡಿದ್ದಾರೆ. ಈಗಾಗಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ಸೇವೆ ಅಂತಿಮವಾಗಿದೆ. ಕರ್ನಾಟಕದ ರಮಣೀಯ ಪಶ್ಚಿಮ ಘಟ್ಟಗಳ ಮೂಲಕ ಐಕಾನಿಕ್ ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡುವುದನ್ನು ಕಾಣಬಹುದು. ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಬರೆದುಕೊಂಡಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸುವ ಮೂಲಕ ಹೊಸ ಸೇವೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.