Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಕೈ ಕಾರ್ಯಕರ್ತ ಬಲಿ, ಉದ್ವಿಗ್ನ ಸ್ಥಿತಿ
ಕರ್ನಾಟಕಪ್ರಮುಖ

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಕೈ ಕಾರ್ಯಕರ್ತ ಬಲಿ, ಉದ್ವಿಗ್ನ ಸ್ಥಿತಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ನಗರದ ಸಿರುಗುಪ್ಪ ರಸ್ತೆಯ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ‌ ಕಾಂಗ್ರೆಸ್ ಮತ್ತು‌ ಬಿಜೆಪಿ ಕಾರ್ಯಕರ್ತರ ನಡುವೆ ಗುರುವಾರ ರಾತ್ರಿ ಘರ್ಷಣೆ ಉಂಟಾದ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ‌ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದಾನೆ.

ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಎರಡು ಗುಂಪುಗಳ ಮಧ್ಯೆ ಈ ಗಲಾಟೆ ನಡೆದಿದೆ.

ಎರಡು ಗುಂಪಿನ ಮಧ್ಯೆ ಮಾತು ಮಾತಿಗೆ ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಲು ಯತ್ನಿಸಿದರು.

ಜ.3ರಂದು ನಗರದ ಎಸ್ಪಿ ವೃತ್ತದ ಬಳಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಅದ್ಧೂರಿ ಸಿದ್ಧತೆ ನಡೆದಿದೆ. ಇದು ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಮಾರಾಮಾರಿಗೆ ಕಾರಣವಾಗಿದೆ.

ಘಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ನಿಯಂತ್ರಿಸಲು, ಜನರನ್ನು ಚದುರಿಸಲು ಪೊಲೀಸರು ಹೈರಾಣಾದರು. ಈ ವೇಳೆ ಸ್ಥಳದಲ್ಲಿದ್ದ ಪೋಲೀಸ್‌ಗೂ ಕಲ್ಲು ಬಡಿದು ಗಾಯಗೊಂಡ ಘಟನೆಯೂ ನಡೆದಿದೆ.

ಈ ವೇಳೆ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗ ರಾಜಶೇಖರ್ ಎಂಬುವರು ಮೃತಪಟ್ಟಿದ್ದಾರೆ. ಜನಾರ್ದನ ರೆಡ್ಡಿ ಅವರ ನಿವಾಸದ ಎದುರು ಹೆಚ್ಚು ಜಮಾವಣೆ ಆಗುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಆಗಮಿಸಿದರು. ಈ ವೇಳೆ ಮತ್ತೆ ಮಾತು ಮಾತಿಗೆ ಬೆಳೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಜನರನ್ನು ಚದುರಿಸಲು ಪೋಲೀಸರು ಹರಸಾಹಸಪಟ್ಟರು.

ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಹಾಗೂ ಆಪ್ತರ ಗುಂಪು ಹಾಗೂ ರೆಡ್ಡಿ ಅವರ ಗುಂಪಿನ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆಯಿತು. ಮತ್ತೆ ಪೋಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಚದುರಿಸಿದರು. ರೆಡ್ಡಿ ನಿವಾಸದ ಎದುರು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಮುಂಜಾಗೃತಾ ಕ್ರಮವಾಗಿ ಹೆಚ್ಚು ಪೋಲೀಸರನ್ನು ನಿಯೋಜಿಸಲಾಗಿದೆ.
ನನ್ನ ಹತ್ಯೆಗೆ ಯತ್ನ ನಡೆದಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದರೆ, ಇದು ಬ್ಯಾನರ್ ಅಳವಡಿಸುವ ಗಲಾಟೆ ಅಲ್ಲ, ವಾಲ್ಮೀಕಿ ಪುತ್ತಳಿ ಅನಾವರಣ ಅದ್ದೂರಿ ಕಾರ್ಯಕ್ರಮ ಆಗಬಾರದು ಎಂದು ಉದ್ದೇಶ ಪೂರ್ವಕವಾಗಿ ಜನಾರ್ದನ ರೆಡ್ಡಿ ನಡೆಸಿದ ಸಂಚು ಇದು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಆರೋಪಿಸಿದ್ದಾರೆ.

TAGGED:Clash between Congress-BJP workersgunshots fired in the airone death suspectedstone pelting
Share This Article
Facebook Twitter Copy Link Print
Previous Article ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ
Next Article Police Officers Transfer 12 ಜಿಲ್ಲೆಗಳಿಗೆ ಹೊಸ ಎಸ್ಪಿ ನೇಮಕ? ಯಾವ ಜಿಲ್ಲೆಗೆ ಯಾರು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?