Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ವಾಷಿಂಗ್ಟನ್: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಅಮೆರಿಕ ಸರಣಿ ದಾಳಿ ನಡೆಸಿದ್ದು, ಕ್ಯಾರಕಾಸ್ ದಟ್ಟ ಹೊಗೆಯಿಂದ ಆವೃತವಾಗಿದೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಶನಿವಾರ ಮುಂಜಾನೆ ರಾಜಧಾನಿ ಕ್ಯಾರಕಾಸ್ ಮೇಲೆ ನಡೆದ ದಾಳಿಯಲ್ಲಿ ಅಮೆರಿಕದ ಪಡೆಗಳು ಭಾಗಿಯಾಗಿರುವುದನ್ನು ಟ್ರಂಪ್ ಆಡಳಿತಾಧಿಕಾರಿಗಳು ದೃಢಪಡಿಸಿದ್ದಾರೆ.
ಟ್ರಂಪ್ ಅವರ ಆದೇಶದಂತೆ ಈ ದಾಳಿ ನಡೆಸಲಾಗಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಹೇಳಿದೆ.
ಈ ಮಧ್ಯೆ, ಅಮೆರಿಕದ ಭದ್ರತಾ ಪಡೆಗಳು ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಹಾಗೂ ಅವರ ಪತ್ನಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.
ಸರಣಿ ಸ್ಫೋಟಗಳು ಸಂಭವಿಸಿದ್ದು, ರಾಜಧಾನಿ ಕ್ಯಾರಕಾಸ್‌ನಲ್ಲಿ ವಿದ್ಯುತ್ ಕಡಿತಗೊಂಡಿದೆ. ಹಲವು ಯುದ್ಧ ವಿಮಾನಗಳನ್ನು ಬಳಸಿ ಅಮೆರಿಕ ದಾಳಿ ನಡೆಸಿದೆ.
ನಗರದ ದಕ್ಷಿಣ ಭಾಗದಲ್ಲಿ ಪ್ರಮುಖ ಸೇನಾ ನೆಲೆಯ ಬಳಿಯೂ ದಟ್ಟವಾದ ಹೊಗೆ ಆವರಿಸಿದೆ. ಈ ಸ್ಫೋಟದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.