Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಂಜಿತಾ ಸಹೋದರ- ಹಂತಕ ರಫೀಕ್‌ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ‌ ಪೊಲೀಸ್ ಬಂದೋಬಸ್ತ್
ಕರ್ನಾಟಕಪ್ರಮುಖ

ರಂಜಿತಾ ಸಹೋದರ- ಹಂತಕ ರಫೀಕ್‌ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ‌ ಪೊಲೀಸ್ ಬಂದೋಬಸ್ತ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರದ ಹಿಂದೂ ಮಹಿಳೆ ರಂಜಿತಾ ಬನ್ಸೋಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಸಿಗುತ್ತಿದೆ.

ಈ‌ ಮಧ್ಯೆ, ರಂಜಿತಾ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳು ಭಾನುವಾರ ಕರೆನೀಡಿದ್ದ ಯಲ್ಲಾಪುರ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ನಗರದಲ್ಲಿ ಬಂದ್ ವೇಳೆ ರಂಜಿತಾ ಶವದ ಮೆರವಣಿಗೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ತ ಅವರು ರಂಜಿತಾ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರಲ್ಲದೆ ಐದು‌ ಲಕ್ಷ ಪರಿಹಾರ ನೀಡಿದರು. ಸರ್ಕಾರ ರಂಜಿತಾ ಕುಟುಂಬಕ್ಕೆ ಎರಡು ಎಕರೆ‌ ಜಮೀನು, 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ರಂಜಿತಾ ಸಹೋದರ ಹಂತಕ ರಫೀಕ್ ಆಪ್ತ:

ಒಂದು ಕಡೆ ರಂಜಿತಾ ಹಂತಕ ರಫೀಕ್ ಕಾಡಿನಲ್ಲಿ ನೇಣಿಗೆ ಶರಣಾಗಿದ್ದರೆ, ಇನ್ನೊಂದೆಡೆ ಕೊಲೆಗಡುಕ ರಫೀಕ್ ಮತ್ತು ರಂಜಿತಾ ಸಹೋದರ ವೀರಭದ್ರ ಬನ್ಸೋಡೆ ಒಟ್ಟಿಗಿದ್ದ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ.

ಪ್ರಕರಣದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳಲ್ಲಿ, ಆರೋಪಿ ರಫೀಕ್ ಹಾಗೂ ಮೃತ ರಂಜಿತಾ ಸಹೋದರ ವೀರಭದ್ರ ಬನ್ಸೋಡೆ ಆಪ್ತರಾಗಿರುವುದು ಎದ್ದು ಕಾಣುತ್ತಿದೆ.

ಈ ಹಿಂದೆ ಖಾಸಗಿ ಹೋಟೆಲ್‌ನಲ್ಲಿ ರಫೀಕ್ ಹಾಗೂ ಇತರ ಸ್ನೇಹಿತರ ಜತೆ ವೀರಭದ್ರ ಊಟ ಮಾಡುತ್ತಾ ಸೆಲ್ಫಿ ತೆಗೆದುಕೊಂಡಿದ್ದರು. ಆರೋಪಿ ರಫೀಕ್ ಮೊದಲಿನಿಂದಲೂ ಕುಟುಂಬಕ್ಕೆ ಪರಿಚಿತನಾಗಿದ್ದ ಹಾಗೂ ಸಹೋದರನ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎಂಬುದು ಈ ಫೋಟೋಗಳಿಂದ ದೃಢಪಟ್ಟಿದೆ.

ರಫೀಕ್ ನನ್ನ ಅಕ್ಕನ ಕ್ಲಾಸ್‌ಮೇಟ್ ಆಗಿದ್ದ. ಮೊದಮೊದಲು ಒಳ್ಳೆಯವನಂತೆ ನಟಿಸುತ್ತಿದ್ದ. ಸಾಲದ ವಿಚಾರವಾಗಿ ಮನೆಗೆ ಬಂದು ಹೋಗುತ್ತಿದ್ದ ಅಷ್ಟೇ. ಆದರೆ ಯಾವುದೋ ಸಂಘದ ಮೂಲಕ ಅಕ್ಕನ ಮೊಬೈಲ್ ನಂಬರ್ ಸಂಗ್ರಹಿಸಿದ್ದ ರಫೀಕ್, ಆಕೆಗೆ ಪ್ರೀತಿ ಮಾಡು, ಭೇಟಿಯಾಗು ಎಂದು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ ಎಂದು ರಂಜಿತಾ ಸಹೋದರಿ ಅಕ್ಷತಾ ತಿಳಿಸಿದ್ದಾರೆ.

ನನ್ನ ಅಕ್ಕ ಮತ್ತು ರಫೀಕ್ ನಡುವೆ ಯಾವುದೇ ಪ್ರೇಮ ಸಂಬಂಧ ಇರಲಿಲ್ಲ. ಗಂಡನ ಜತೆ ಬಾಂಧವ್ಯ ಸರಿಯಿಲ್ಲದ ಕಾರಣ ಆಕೆಯನ್ನು ತಂದು ಮನೆಯಲ್ಲಿ ಇರಿಸಿಕೊಂಡಿದ್ದೆವು. ರಫೀಕ್ ಕಾಟ ಜಾಸ್ತಿಯಾದಾಗ ನಾವು ಆತನಿಗೆ ಫೋನ್ ಮಾಡಿ ಬೈದು, ಸಂಪರ್ಕ ಬಿಡುವಂತೆ ಎಚ್ಚರಿಕೆ ನೀಡಿದ್ದೆವು. ಆದರೆ ಅದನ್ನೇ ಮನಸ್ಸಿನಲ್ಲಿಟ್ಟುಕೊಂಡು ನಿನ್ನೆ ದಾರಿಯಲ್ಲಿ ಅಡ್ಡಗಟ್ಟಿ ಅಕ್ಕನನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ.

ರಫೀಕ್ ರಂಜಿತಾಗೆ ಚಾಕು ಹಾಕುವುದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದರೂ, ಈಗ ಭಯದಿಂದ ಯಾರೂ ಹೇಳಿಕೆ ನೀಡಲು ಮುಂದೆ ಬರುತ್ತಿಲ್ಲ ಎಂದು ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ.

ರಂಜಿತಾ ಕೊಲೆಗೈದು ಪರಾರಿಯಾಗಿದ್ದ ರಫೀಕ್ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್ ಅವರು ನಾಲ್ಕು ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಿದ್ದರು. ಡಾಗ್ ಸ್ಕ್ವಾಡ್ ನೆರವಿನಿಂದ ರಾಮಾಪುರ ಕಾಜಲವಾಡ ಕಾಡಿನಲ್ಲಿ ಹುಡುಕಾಟ ನಡೆಸಿದಾಗ, ಆರೋಪಿಯು ಮರವೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಎಸ್ಪಿ ದೀಪನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಿಗಿ ಬಂದೋಬಸ್ತ್

ಘಟನೆಯ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಎಸ್ಪಿ ದೀಪನ್ ಹಾಗೂ ಉಡುಪಿ ಎಸ್ಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ. 4 ಕೆಎಸ್‌ಆರ್‌ಪಿ ಹಾಗೂ 6 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.

FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ

TAGGED:police deployed everywhereRanjitha's brother's killer Rafiq's close associates: Yellapur tense
Share This Article
Facebook Twitter Copy Link Print
Previous Article FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ
Next Article ನಿಧಿಯಾಸೆಗೆ 8 ತಿಂಗಳ ಗಂಡು ಮಗು ಬಲಿ ಕೊಡಲು ಯತ್ನ, ಅಧಿಕಾರಿಗಳಿಂದ ರಕ್ಷಣೆ

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?