Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹೊಸಕೋಟೆ(ಬೆಂಗಳೂರು): ನಿಧಿ ಆಸೆಗೆ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ಯತ್ನ ಹೊಸಕೋಟೆ ತಾಲೂಕು ಸೂಲಿಬೆಲೆಯ ಜನತಾ ಕಾಲೊನಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ದೂರಿನ ಮೇಲೆ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ತಂಡ ದಾಳಿ ಮಾಡಿ, ಮಗುವನ್ನು ರಕ್ಷಿಸಿವೆ.
ಸೈಯದ್ ಇಮ್ರಾನ್ ಎಂಬಾತನ ಮನೆ ಮೇಲೆ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಲೈನ್, ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಸೂಲಿಬೆಲೆ ಪೊಲೀಸರು ದಾಳಿ ಮಾಡಿದ್ದಾರೆ.
ಈ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮ್ಮ ಮಾಧ್ಯಮದೊಂದಿಗೆ ಮಾತನಾಡಿ, ನಿಧಿ ತೆಗೆಯುವ ಉದ್ದೇಶಕ್ಕೆ ಮಗುವನ್ನು ಬಲಿಕೊಡಲು ಒಂದು ಮನೆಯಲ್ಲಿ 8 ತಿಂಗಳ ಮಗು ಸಾಕಿದ್ದಾರೆ ಎಂದು ದೂರು ನೀಡಿದ್ದರು. ಆ ಮನೆಯ ಕೋಣೆಯೊಂದರಲ್ಲಿ ಗುಂಡಿ ತೋಡಿದ್ದರು. ಸ್ಥಳದಲ್ಲಿ ಪೂಜಾ ಸಾಮಗ್ರಿ ಸಿಕ್ಕಿದೆ. ಇವುಗಳು ಮೇಲ್ನೋಟಕ್ಕೆ ಅನುಮಾನಾಸ್ಪದವಾಗಿ ಕಂಡುಬಂದಿವೆ ಎಂದು ತಿಳಿಸಿದರು.
ಸೋಮವಾರ ಸಿಡಬ್ಲೂಸಿ ಎದುರು ಮಗುವನ್ನು ಹಾಜರುಪಡಿಸುತ್ತೇವೆ. ಅಲ್ಲಿ ಪೋಷಕರು ಬಂದು ಏನು ಹೇಳುತ್ತಾರೆ ಎಂಬುದನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಮಗುವನ್ನು ಬಾಲ ಮಂದಿರದಲ್ಲಿ ಇರಿಸಲಾಗಿದೆ. ಅವರ ಮನೆಯಿಂದ ಜಪ್ತಿ ಮಾಡುವಂಥದ್ದು ಏನೂ ಇರಲಿಲ್ಲ ಎಂದರು.
ಪೋಷಕರು ದತ್ತು ತೆಗೆದುಕೊಂಡಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಅದು ಕಾನೂನುಬದ್ಧವಾಗಿಲ್ಲ. ದತ್ತು ತೆಗೆದುಕೊಂಡಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ. ಸೋಮವಾರ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ವಿಚಾರಣೆ ಮಾಡಲಾಗುವುದು. ಇಲ್ಲಿ ಸೈಯದ್ ಇಮ್ರಾನ್‌ನ ಹೇಳಿಕೆ ಪಡೆದುಕೊಳ್ಳಲಾಗುವುದು. ನಂತರ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ರಂಜಿತಾ ಸಹೋದರ- ಹಂತಕ ರಫೀಕ್ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ ಪೊಲೀಸ್ ಬಂದೋಬಸ್ತ್