Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿರಾಟ್ ಕೊಹ್ಲಿ ಜರ್ಸಿ ಮೇಲೆ ನಂದಿನಿ!
ಕರ್ನಾಟಕದೇಶಪ್ರಮುಖ

ವಿರಾಟ್ ಕೊಹ್ಲಿ ಜರ್ಸಿ ಮೇಲೆ ನಂದಿನಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ತನ್ನ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಜೊತೆ ಅಧಿಕೃತ ಪ್ರಾಯೋಜಕತ್ವದ ಒಪ್ಪಂದ ಮಾಡಲು ಮುಂದಾಗಿದೆ. ಈ ಮೂಲಕ ನಂದಿನಿ ಬ್ರ್ಯಾಂಡ್‌ ದೇಶಾದ್ಯಾಂತ ಜನರ ಗಮನ ಸೆಳೆಯುವ ಅವಕಾಶ ಪಡೆಯಲಿದೆ.

ಕೆಎಂಎಫ್ ತನ್ನ ನಂದಿನಿ ಬ್ರ್ಯಾಂಡ್ ಮೂಲಕ ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಧಿಕೃತ ಪ್ರಾಯೋಜಕತ್ವದ ಒಪ್ಪಂದ ಮಾಡಿಕೊಳ್ಳಲು ಯೋಜನೆ ರೂಪಿಸಿದೆ. ಈ ಸಂಬಂಧ ಐಪಿಎಲ್ ಮತ್ತು ಫ್ರಾಂಚೈಸಿ ನಿಯಮಾವಳಿಗಳಿಗೆ ಅನುಗುಣವಾಗಿ ಅಗತ್ಯ ಹಕ್ಕುಗಳನ್ನು ಪಡೆಯಲು ಏಜೆನ್ಸಿಗಳನ್ನು ನೇಮಿಸುವ ಸಲುವಾಗಿ ಟೆಂಡರ್ ಪ್ರಕ್ರಿಯೆಯನ್ನು ಕೆಎಂಎಫ್ ಆರಂಭಿಸಿದೆ. ಕಳೆದ ಐಪಿಎಲ್ ಸೀಸನ್‌ನಲ್ಲಿ ಆರ್‌ಸಿಬಿಯ ಡೈರಿ ಪ್ರಾಯೋಜಕನಾಗಿದ್ದ Amul ಸ್ಥಾನವನ್ನು ಈ ಬಾರಿ ನಂದಿನಿ ಪಡೆದುಕೊಳ್ಳುವ ಸಾಧ್ಯತೆ ಇದೆ.

ನಾವು 2026ರ ಐಪಿಎಲ್‌ಗಾಗಿ ಆರ್‌ಸಿಬಿ ಜೊತೆ ಅಧಿಕೃತ ಪಾಲುದಾರಿಕೆಯನ್ನು ಎದುರು ನೋಡುತ್ತಿದ್ದೇವೆ,ಎಂದು ಕೆಎಂಎಫ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮನಿಕಂಟ್ರೋಲ್‌ ವರದಿ ಮಾಡಿದೆ. ಅಮುಲ್ ಕಳೆದ ಬಾರಿ 9 ತಂಡಗಳನ್ನು ಪ್ರಾಯೋಜಿಸಿತ್ತು, ಆದರೆ ಈ ಬಾರಿ ಕೆಎಂಎಫ್ ನಂದಿನಿಯನ್ನು ಮುಂಚೂಣಿಗೆ ತರಲು ಯೋಜಿಸಿದೆ.

ಈ ಕುರಿತು ಮಾತನಾಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ, ಕರ್ನಾಟಕವನ್ನು ಪ್ರತಿನಿಧಿಸುವ ಆರ್‌ಸಿಬಿ ತಂಡಕ್ಕೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಅಭಿಮಾನಿ ಬಳಗವಿದೆ. ಜಾಗತಿಕ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ತಂಡದ ಪ್ರಮುಖ ಮುಖವಾಗಿದ್ದಾರೆ. ಕೊಹ್ಲಿ ಹಾಗೂ ತಂಡದ ಇತರೆ ಇಬ್ಬರು ಆಟಗಾರರನ್ನು ಬಳಸಿಕೊಂಡು ನಂದಿನಿ ಬ್ರ್ಯಾಂಡ್ ಪ್ರಚಾರ ಮಾಡಲು ನಾವು ಉದ್ದೇಶಿಸಿದ್ದೇವೆ. ಇದು ಕೇವಲ ಕರ್ನಾಟಕಕ್ಕೆ ಸೀಮಿತವಾಗದೆ, ದಿಲ್ಲಿ, ಮುಂಬೈ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿಯೂ ನಂದಿನಿ ಮಾರುಕಟ್ಟೆ ವಿಸ್ತರಿಸಲು ನೆರವಾಗಲಿದೆ, ಎಂದು ಹೇಳಿದ್ದಾರೆ.

 

https://www.newsics.com/2026/01/06/switzerland-orders-immediate-seizure-of-president-nicolas-maduros-assets/

TAGGED:Nandini on Virat Kohli's jersey!
Share This Article
Facebook Twitter Copy Link Print
Previous Article ಬಾಂಗ್ಲಾದೇಶದಲ್ಲಿ ಮುಂದುವರೆದ ಹಿಂದೂಗಳ ಹತ್ಯೆ – ನಿನ್ನೆ ಒಂದೇ ದಿನ ಇಬ್ಬರ ಯುವಕರ ಕೊಲೆ
Next Article ASTRO ಮಂಗಳ- ಶುಕ್ರ ಸಂಯೋಗ: ಇಂದಿನಿಂದ 5 ದಿನ ಈ ನಾಲ್ಕು ರಾಶಿಗಳ ಜನರಿಗೆ ಭಾರೀ ಕಷ್ಟ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?