Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಮೆಜೆಸ್ಟಿಕ್ ನಿಂದ ಮಲ್ಲೇಶ್ವರಂನ ಮಂತ್ರಿ ಮಾಲ್ ವರೆಗಿನ ರಸ್ತೆಗೆ ವೈಟ್ ಟ್ಯಾಪಿಂಗ್ ನಡೆಯಲಿರುವ ಹಿನ್ನೆಲೆ ಮೂರು ತಿಂಗಳು ರಸ್ತೆ ಬಂದ್ ಆಗಲಿದೆ.
ಬಿ ಸ್ಮೈಲ್ ಕಡೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ ಮೂರು ತಿಂಗಳು ರಸ್ತೆ ಬಂದ್ ಆಗಲಿರಲಿದೆ. ಬಂದ್ ಆಗಿರುವುದರಿಂದ ಮೆಜೆಸ್ಟಿಕ್‌ನಿಂದ ಬರುವ ವಾಹನಗಳು ಓಕುಳಿಪುರಂ ಅಂಡರ್ ಪಾಸ್ ಸುಜಾತ್ ಸರ್ಕಲ್ ಮಾರ್ಗವಾಗಿ ಮಲ್ಲೇಶ್ವರಂ ಪ್ರವೇಶ ಮಾಡಬೇಕಿದೆ ಹೀಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಸ್ತಿ ಆಗಲಿದೆ.
ಈ ಮೊದಲು ಮೆಜೆಸ್ಟಿಕ್ನಿಂದ ಮಂತ್ರಿಮಾಲ್ ಮಾರ್ಗವಾಗಿ ಕೇವಲ 10 ನಿಮಿಷದಲ್ಲಿ ಮಲ್ಲೇಶ್ವರಂ ಗೆ ಹೋಗಬಹುದಿತ್ತು. ಆದರೆ ರಸ್ತೆ ಬಂದ್ ಆಗಿರುವ ಕಾರಣ ಪೀಕ್ ಅವಧಿಯಲ್ಲಿ ಮಲ್ಲೇಶ್ವರಂಗೆ ಬರಲು ಕನಿಷ್ಠ 30 ರಿಂದ 1 ಗಂಟೆ ಬೇಕಾಗುತ್ತದೆ. ಟ್ರಾಫಿಕ್ ಜಾಮ್ ಆದರೆ ಮತ್ತಷ್ಟು ಸಮಯ ಬೇಕಾಗುತ್ತದೆ.
https://www.newsics.com/2026/01/06/did-a-female-techie-suffocate-to-death-in-her-apartment/