newsics.com
ಮಹಾರಾಷ್ಟ್ರ: ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 100 ಅಡಿ ಪ್ರವಾತಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬೋರ್ನ್ ಘಾಟ್ನಲ್ಲಿ ನಡೆದಿದೆ.
ವರದಿಗಳ ಪ್ರಕಾರ ಯುವತಿ ತನ್ನ ಸ್ನೇಹಿತರೊಂದಿಗೆ ಶನಿವಾರ ಬೋರ್ನ್ ಘಾಟ್ಗೆ ತೆರಳಿದ್ದಾರೆ. ಈ ವೇಳೆ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೇ ಮುಂದೆ ಹೋಗಿದ್ದು, ಕಾಲು ಜಾರಿ 100 ಅಡಿ ಆಳಕ್ಕೆ ಬಿದ್ದಿದ್ದಾಳೆ.
ಸ್ಥಳೀಯರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಈ ರಕ್ಷಣಾ ಕಾರ್ಯಾಚರಣೆಯನ್ನು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.