Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.
ಹೌದು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲ ನಿರ್ಧರಿಸಲಾಗಿದೆ ಎಂದರು.
ರಾಜ್ಯದ ಬಿ-ಖಾತಾ ನಿವೇಶನ, ಕಟ್ಟಡ, ಫ್ಲ್ಯಾಟ್ ಗಳಿಗೆ ಎ-ಖಾತಾ ನೀಡಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಂತ 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ಇದನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೋಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಗ್ರೀನ್ ಫೈಲ್ ಹೊತ್ತೊಯ್ದ ಸಿಎಂ ಮಮತಾ