Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಸರಗೋಡು ಕನ್ನಡಿಗರ ಮೇಲೆ ಮಲಯಾಳಂ ಹೇರಬೇಡಿ : ಪಿಣರಾಯ್ ವಿಜಯನ್​ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಕರ್ನಾಟಕದೇಶಪ್ರಮುಖ

ಕಾಸರಗೋಡು ಕನ್ನಡಿಗರ ಮೇಲೆ ಮಲಯಾಳಂ ಹೇರಬೇಡಿ : ಪಿಣರಾಯ್ ವಿಜಯನ್​ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರಕಾರದ ಪ್ರಸ್ತಾಪಿತ ‘ಮಲೆಯಾಳಿ ಭಾಷಾ ಮಸೂದೆ-2025’ ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಆಕ್ಷೇಪಿಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ ನಿರ್ಲಕ್ಷಿಸಿ ಅವರ ಮೇಲೆ ಭಾಷೆಯನ್ನು ಹೇರಿದ್ದೇ ಆದಲ್ಲಿ ನಮ್ಮ ಸರ್ಕಾರ ಅವರ ಜತೆಯಲ್ಲಿ ನಿಂತು ಸರ್ವ ರೀತಿಯ ಬೆಂಬಲ ನೀಡಲಿದೆ ಎಂದಿದ್ದಾರೆ.

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ ಎಂದು ಅವರು ಹೇಳಿದ್ದಾರೆ.

 

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುತ್ತೇನೆ.

ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ.

ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಎಕ್ಸ್ ಸಂದೇಶದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

 

https://www.newsics.com/2026/01/09/looking-for-nateli-burn-who-appeared-bold-with-yash/

TAGGED:Don't impose Malayalam on Kannadigas in Kasaragod: Siddaramaiah's anger against Pinarayi Vijayan
Share This Article
Facebook Twitter Copy Link Print
Previous Article ಯಶ್​ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ನಟೇಲಿ ಬರ್ನ್​ಗೆ ಹುಡುಕಾಟ
Next Article ಮಹಿಳೆಯರ ಉದ್ಯೋಗ, ವಾಸಕ್ಕೆ ಬೆಂಗಳೂರೇ ಸೇಫ್ – ದೇಶದಲ್ಲಿ ಸಿಲಿಕಾನ್ ಸಿಟಿಗೆ ನಂಬರ್ 1 ಸ್ಥಾನ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?