Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲ; ಡಿಕೆಶಿಗೆ ಕುಮಾರಸ್ವಾಮಿ ಟಾಂಗ್
ಕರ್ನಾಟಕಪ್ರಮುಖ

ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲ; ಡಿಕೆಶಿಗೆ ಕುಮಾರಸ್ವಾಮಿ ಟಾಂಗ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶೀಘ್ರವೇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಡಿಕೆಶಿ ಹೇಳಿಕೆ ನೀಡಿದ್ರು. ಅಲ್ಲದೇ ನಾನು ಕುಮಾರಸ್ವಾಮಿಗಿಂತ ಅನುಭವಿ ಎಂದು ಹೇಳಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಡಿಕೆಶಿ ಮಾತಿಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ, ನಮ್ಮ ವಿಲೀನದ ಚಿಂತೆ ಪಕ್ಕಕ್ಕಿಡಿ. ನನ್ನ, ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ ಎನ್ನುತ್ತಾ ಕಿಡಿಕಾರಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ ಉಪ ಮುಖ್ಯಮಂತ್ರಿ! ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದು ಕುಮಾರಸ್ವಾಮಿ ಬರೆದಿದ್ದಾರೆ.

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ. ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ. ವಿನಮ್ರವಾಗಿ ಒಪ್ಪಿಕೊಳ್ಳುವೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು.. ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!?? ಎಂದು ಬರೆಯುವ ಮೂಲಕ ಡಿಕೆಶಿಗೆ ಎಚ್ಡಿಕೆ ಟಾಂಗ್ ಕೊಟ್ಟಿದ್ದಾರೆ.

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

https://x.com/hd_kumaraswamy/status/2009441721067634991?ref_src=twsrc%5Etfw%7Ctwcamp%5Etweetembed%7Ctwterm%5E2009441721067634991%7Ctwgr%5E6660e729f7e6f5a47ae443de5a27c2280f20c967%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಶಾಲಾ ಸಿಬ್ಬಂದಿಯಿಂದಲೇ ಕೋಟಿ ಕೋಟಿ ಹಣ ವಂಚನೆ: ಇಬ್ಬರು ಅರೆಸ್ಟ್

TAGGED:It is not my experience to snatch; Kumaraswamy to DK
Share This Article
Facebook Twitter Copy Link Print
Previous Article ಶಾಲಾ ಸಿಬ್ಬಂದಿಯಿಂದಲೇ ಕೋಟಿ ಕೋಟಿ ಹಣ ವಂಚನೆ: ಇಬ್ಬರು ಅರೆಸ್ಟ್
Next Article ಗರ್ಭಪಾತಕ್ಕೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ತೀರ್ಪು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?