newsics. com
ಢಾಕ: ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಕನಿಷ್ಠ 32 ಮಂದಿ ಮೃತರಾಗಿದ್ದಾರೆ.
ಉದ್ಯೋಗ ಮೀಸಲಾತಿ ವಿಚಾರವಾಗಿ ಹೊತ್ತಿ ಉರಿದಿದ್ದ ಬಾಂಗ್ಲಾದೇಶ ಮತ್ತೆ ಇಂದು ಉದ್ವಿಗ್ನಗೊಂಡಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಕನಿಷ್ಠ 32 ಮಂದಿ ಮೃತರಾಗಿದ್ದಾರೆ ಎಂದು ಅಲ್ಲಿನ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಘರ್ಷಣೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ, ಪೊಲೀಸರು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಪ್ರಯೋಗಿಸಿ ಹತ್ತಾರು ಸಾವಿರ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
ಢಾಕಾ ಮತ್ತು ಇತರ ಹಲವು ಭಾಗಗಳಲ್ಲಿ ಮತ್ತೆ ಕರ್ಫ್ಯೂ ಹೇರಲಾಗಿದೆ. “ಢಾಕಾ ಮೆಟ್ರೋಪಾಲಿಟನ್ ಪ್ರದೇಶ ಮತ್ತು ಎಲ್ಲಾ ವಿಭಾಗೀಯ ಕೇಂದ್ರಗಳು, ನಗರ ನಿಗಮಗಳು, ಪುರಸಭೆಗಳು, ಕೈಗಾರಿಕಾ ಪ್ರದೇಶಗಳು, ಜಿಲ್ಲೆ ಮತ್ತು ಉಪಜಿಲಾ ಪ್ರಧಾನ ಕಚೇರಿಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ” ಎಂದು ಗೃಹ ಸಚಿವಾಲಯವು ಸೂಚಿಸಿದೆ.