Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೌಟುಂಬಿಕ ಕಲಹದಿಂದ ಬೇಸತ್ತ ಬಿಜೆಪಿ ಮುಖಂಡರೊಬ್ಬರು ಮನನೊಂದು ಕಾರ್ ನಲ್ಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ನಾಗನೂರ ಎಂಬಲ್ಲಿ ನಡೆದಿದೆ.
ದಾವಣಗೆರೆ ಬಿಜೆಪಿ ಮುಖಂಡ, ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ ಸಂಕೋಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂದ್ರಶೇಖರ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಮಕ್ಕಳಿಗೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿದೆ. ಇದರಿಂದ ಮನನೊಂದು ಚಂದ್ರಶೇಖರ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂದ್ರಶೇಖರ ಸಂಕೋಲ್ ಈ ಹಿಂದೆ ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://www.newsics.com/2026/01/11/grok-pornography…government-order/