Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಗನಸಖಿ ಆತ್ಮಹತ್ಯೆ: ಮಾಜಿ ಪ್ರಿಯಕರನ ವಿರುದ್ಧ ಪ್ರಕರಣ ದಾಖಲು
ಪ್ರಮುಖವಿದೇಶ

ಗಗನಸಖಿ ಆತ್ಮಹತ್ಯೆ: ಮಾಜಿ ಪ್ರಿಯಕರನ ವಿರುದ್ಧ ಪ್ರಕರಣ ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಥಾಣೆ: ಮದುವೆಯಾಗಲು ನಿರಾಕರಿಸಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಮಾಜಿ ಪ್ರಿಯಕರನ ಕಿರುಕುಳ ತಾಳಲಾರದೆ 21 ವರ್ಷ ಪ್ರಾಯದ ಗಗನಸಖಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಥಾಣೆ ಜಿಲ್ಲೆಯಲ್ಲಿ ಸಂಭವಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಸೆವಾಡಿ ಪೊಲೀಸರು ಮೃತಳ ಮಾಜಿ ಸಂಗಾತಿಯ (23) ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2025ರ ಡಿ. 28ರಂದು ಕಲ್ಯಾಣ್ (ಪೂರ್ವ) ದಲ್ಲಿರುವ ಅನುಸುಯಾ ನಿವಾಸ್‌ನಲ್ಲಿ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ರುಕ್ಮಿಣಿಬಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.
ಅಂತ್ಯಕ್ರಿಯೆಯ ಅನಂತರ ಹೆತ್ತವರು ಮಗಳ ಮೊಬೈಲ್ ಫೋನ್ ಮತ್ತು ಬ್ಯಾಂಕ್ ವಹಿವಾಟುಗಳನ್ನು ಪರಿಶೀಲಿಸಿದಾಗ ಆಘಾತಕಾರಿ ವಿಷಯಗಳು ಹೊರಬಂದಿವೆ. ಮೃತ ಯುವತಿ ಮತ್ತು ಆರೋಪಿಯ ನಡುವೆ 2020ರಿಂದ ಪ್ರೇಮ ಸಂಬಂಧವಿತ್ತು. ಆದರೆ ಇತ್ತೀಚೆಗೆ ಆರೋಪಿ ಬೇರೊಬ್ಬ ಯುವತಿಯೊಂದಿಗೆ ಸಂಬಂಧ ಬೆಳೆಸಿದ್ದಲ್ಲದೆ, ಸಂತ್ರಸ್ತೆಯನ್ನು ಮದುವೆಯಾಗಲು ನಿರಾಕರಿಸಿದ್ದ.
ಅಲ್ಲದೆ ಆಕೆಯ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಮದುವೆಯ ನೆಪದಲ್ಲಿ ಲಕ್ಷಾಂತರ ರೂ. ಹಣವನ್ನು ಪಡೆದಿದ್ದ ಎಂದು ಆರೋಪಿಸಲಾಗಿದೆ.
ಮೃತದೇಹದ ಮೇಲಿದ್ದ ಗುರುತುಗಳು ಮತ್ತು ಮೊಬೈಲ್ ಚಾಟ್‌ಗಳು ಆಕೆಯ ಮೇಲೆ ದೈಹಿಕ ಹಲ್ಲೆ ನಡೆದಿರುವುದನ್ನೂ ಸೂಚಿಸಿವೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಾಕ್ಷ್ಯಾಧಾರಗಳು ಮತ್ತು ಮೃತಳ ತಾಯಿ ನೀಡಿದ ದೂರಿನ ಮೇರೆಗೆ, ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!

TAGGED:Gagan Sakhi commits suicide: Case registered against ex-boyfriend
Share This Article
Facebook Twitter Copy Link Print
Previous Article GOOD MORNING | Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 15-01-2026, ಗುರುವಾರ
Next Article Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?