newsics.com
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ . ಈ ಕುರಿತು ಮಾತನಾಡಿರುವ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್, ಮಧ್ಯಂತರ ಸರ್ಕಾರವನ್ನು ರಚಿಸುವುದಾಗಿ ಹೇಳಿದ್ದಾರೆ. ನಾನು ಸಂಪೂರ್ಣವಾಗಿ ಬಾಂಗ್ಲಾದೇಶದ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದ್ದೇನೆ. ನಾವು ಮಧ್ಯಂತರ ಸರ್ಕಾರವನ್ನು ರಚಿಸುತ್ತೇವೆ ಎಂದು ವಕಾರ್ ಹೇಳಿದ್ದಾರೆ.
ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಮಿಲಿಟರಿ ಡ್ರೆಸ್ ಮತ್ತು ಕ್ಯಾಪ್ ಧರಿಸಿದ್ದರು. ಆದರೆ, ಅವರು ಉಸ್ತುವಾರಿ ಸರ್ಕಾರವನ್ನು ಮುನ್ನಡೆಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.