Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಗದಗ: ಐತಿಹಾಸಿಕ ವಸ್ತುಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾಡಳಿತ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭಿಸಿದೆ. ಜನವರಿ 16ರಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
ಗದಗನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರಿನಿಂದ ಉತ್ಖನನ ಕಾರ್ಯ ಆರಂಭವಾಗಿದೆ. ಎರಡನೇ ದಿನದ ಉತ್ಖನನದ ವೇಳೆ ಮಣ್ಣಿನಲ್ಲಿ ಪುರಾತನ ವಸ್ತುವೊಂದು ಪತ್ತೆಯಾಗಿದೆ. ನಿನ್ನೆಯಿಂದ ಈವರೆಗೆ ವೀರಭದ್ರೇಶ್ವರ ದೇವಸ್ಥಾದ ಬಳಿ 10 ಮೀಟರ್ ಉದ್ದ ಹಾಗೂ 10 ಮೀಟರ್ ಅಗಲ ಉತ್ಖನನ ಮಾಡಲಾಗಿದೆ. ಇಂದು ಬೆಳಿಗ್ಗೆ ಉತ್ಖನನ ಕಾರ್ಯದ ವೇಳೆ ಪುರಾತವಾದ ವಸ್ತುವೊಂದು ಪತ್ತೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇನ್ನು ಉತ್ಖನನ ನಡೆಸುವ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರಿನಿಂದ ಉತ್ಖನನ ಆರಂಭವಾಗಿದ್ದು, ಉತ್ಖನನ ನಡೆಯುವ ಸ್ಥಳದಲ್ಲಿ ಸಾರ್ವಜನಿಕರ ಪ್ರವೇಶ, ಫೋಟೋ, ವಿಡಿಯೋ ಚಿತ್ರೀಕರಣಗಳನ್ನು ನಿರ್ಬಂಧಿಸಲಾಗಿದೆ. ಐತಿಹಾಸಿಕ ನಿಧಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದ್ದಾರೆ.
ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರಿನಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಈ ಪ್ರದೇಶ ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಉತ್ಖನನ ಕಾರ್ಯ ಸಂಪೂರ್ಣವಾಗುವವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಕೃತವಾಗಿ ನೇಮಕಗೊಂಡವರನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರು, ಪ್ರವಾಸಿಗರು, ಇತರ ವ್ಯಕ್ತಿಗಳು ಈ ಸ್ಥಳಕ್ಕೆ ಪ್ರವೇಶಿಸಲು, ಫೋಟೋಗ್ರಫಿ, ವಿಡಿಯೋಗ್ರಫಿ ತೆಗೆಯಲು ಅವಕಾಶವಿಲ್ಲ.
ಪಾರಂಪರಿಕ ಪ್ರದೇಶ ಸಂರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಉತ್ಖನನ ಕಾರ್ಯ ನಿರ್ವಿಘ್ನವಾಗಿ ನಡೆಯುವ ದೃಷ್ಟಿಯಿಂದ, ಉತ್ಖನನ ನಡೆಯುತ್ತಿರುವ ಪ್ರದೇಶವನ್ನು ‘ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲಾಗಿದೆ. ಪುರಾತತ್ವ ಇಲಾಖೆಯ ಶಿಫಾರಸ್ಸಿನ ಮೇರೆಗೆ ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ ಅವರು ಉತ್ಖನನ ಕಾರ್ಯ ಮುಗಿಯುವವರೆಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಈ ಪ್ರದೇಶದಲ್ಲಿ ಸಾರ್ವಜನಿಕರ ಫೋಟೋ ಹಾಗೂ ವೀಡಿಯೋಗ್ರಫಿಗೂ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಉತ್ಖನನ ಕಾರ್ಯಕ್ಕೆ ಯಾವುದೇ ರೀತಿಯ ಅಡಚಣೆ ಆಗಬಾರದು ಎಂಬ ಕಾರಣದಿಂದಲೇ ಈ ನಿರ್ಬಂಧ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಕಿವೀಸ್ ವಿರುದ್ಧದ ಫೈನಲ್ ಫೈಟ್‌ಗೂ ಮುನ್ನ ಮಹಾಕಾಳೇಶ್ವರನ ಮೊರೆ ಹೋದ ವಿರಾಟ್ ಕೊಹ್ಲಿ