Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ
ದೇಶಪ್ರಮುಖವೈರಲ್

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅತ್ಯಾಚಾರ ಪ್ರಕರಣಗಳಿಗೆ ಮಹಿಳೆಯರ ಸೌಂದರ್ಯವೇ ಕಾರಣ” ಎಂದು ನಾಲಗೆ ಹರಿಯಬಿಡುವ ಮೂಲಕ ಕಾಂಗ್ರೆಸ್‌ ಶಾಸಕ ವಿವಾದ ಹುಟ್ಟು ಹಾಕಿದ್ದಾರೆ.

ಮಧ್ಯ ಪ್ರದೇಶದ ಕಾಂಗ್ರೆಸ್‌ ಶಾಸಕ ಫೂಲ್ ಸಿಂಗ್ ಬರೈಯ ಈ ರೀತಿಯ ಹೇಳಿಕೆ ನೀಡಿದ ʼಮಹಾನುಭಾವʼ. ಸದ್ಯ ಅವರ ಈ ಹೇಳಿಕೆ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ದೇಶಾದ್ಯಂತ ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ʼʼಒಬ್ಬ ಪುರುಷನು ರಸ್ತೆಯಲ್ಲಿ ಹೋಗುವಾಗ ಸುಂದರವಾದ ಹುಡುಗಿಯನ್ನು ನೋಡಿದರೆ ಅವನ ಮನಸ್ಸು ಚಂಚಲಗೊಂಡು ದಾರಿ ತಪ್ಪುತ್ತದೆ ಮತ್ತು ಇದು ಅತ್ಯಾಚಾರಕ್ಕೆ ಪ್ರೇರೇಪಣೆ ನೀಡುತ್ತದೆʼʼ ಎಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ವ್ಯಕ್ತಿಗಳಿಗಿಂತ ಹೆಚ್ಚಾಗಿ ಗುಂಪುಗಳಿಂದಲೇ ಅತ್ಯಾಚಾರ ನಡೆಯುತ್ತದೆ ಎಂದು ಬರೈಯ ಹೇಳಿದ್ದಾರೆ. ಶಿಶುಗಳ ಮೇಲೂ ನಡೆಯುವ ಇಂತಹ ಅಪರಾಧವನ್ನು ಅವರು ಖಂಡಿಸಿದ್ದಾರೆ. “ಭಾರತದಲ್ಲಿ ಅತ್ಯಾಚಾರಕ್ಕೆ ಹೆಚ್ಚು ಬಲಿಯಾಗುವವರು ಯಾರು? ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಕ್ಕೆ ಸೇರಿದವರು. ಅತ್ಯಾಚಾರದ ಸಿದ್ಧಾಂತವೆಂದರೆ ಒಬ್ಬ ಪುರುಷ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸುಂದರ ಹುಡುಗಿಯನ್ನು ನೋಡಿದರೆ ಅದು ಅವನ ಮನಸ್ಸನ್ನು ಬೇರೆಡೆಗೆ ತಿರುಗಬಹುದು ಮತ್ತು ಅತ್ಯಾಚಾರ ಎಸಗುವಂತೆ ಮಾಡಬಹುದು” ಎಂದು ಅವರು ಹೇಳಿದ್ದಾರೆ.

ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಮಹಿಳೆಯರು ಸುಂದರವಾಗಿಲ್ಲದಿದ್ದರೂ ಪುರಾತನ ಧರ್ಮಗ್ರಂಥಗಳಲ್ಲಿ ಬರೆದಿರುವುದರಿಂದ ಅವರ ಮೇಲೆ ಅತ್ಯಾಚಾರವಾಗುತ್ತದೆ ಎಂದು ಬರೈಯ ತಿಳಿಸಿದ್ದಾರೆ.

ʼರುದ್ರಯಾಮಲ ತಂತ್ರʼ ಎಂಬ ಪುರಾತನ ಗ್ರಂಥವನ್ನು ಉಲ್ಲೇಖಿಸಿದ ಅವರು, ʼʼಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯದ ಮಹಿಳೆಯರೊಂದಿಗೆ ದೈಹಿಕ ಸಂಬಂಧ ಹೊಂದುವುದು ಪುಣ್ಯಕ್ಷೇತ್ರ ಸಂದರ್ಶಿಸಿದಷ್ಟೇ ಪುಣ್ಯ ಲಭಿಸುತ್ತದೆ ಎಂದು ಕೆಲವರು ನಂಬಿರುವುದು ಅಪರಾಧಗಳ ಸಂಖ್ಯೆ ಹೆಚ್ಚಾಗಲು ಕಾರಣʼʼ ಎಂದಿದ್ದಾರೆ. “ತೀರ್ಥಯಾತ್ರೆಗೆ ಹೋಗಲು ಸಾಧ್ಯವಾಗದಿದ್ದರೆ ಪರ್ಯಾಯವೇನು? ನಂಬಿಕೆಯ ಪ್ರಕಾರ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಹೊಂದುವುದು. ಇದಕ್ಕಾಗಿ ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಾರೆ. ಒಬ್ಬ ಪುರುಷನು ಮಹಿಳೆಯ ಒಪ್ಪಿಗೆಯಿಲ್ಲದೆ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾಲ್ಕು ತಿಂಗಳ ಮತ್ತು ಒಂದು ವರ್ಷದ ಹೆಣ್ಣುಮಕ್ಕಳ ಮೇಲೆಯೂ ಅತ್ಯಾಚಾರ ನಡೆಯುತ್ತದೆʼʼ ಎಂದೆಲ್ಲ ನಾಲಗೆ ಹರಿಯಬಿಟ್ಟಿದ್ದಾರೆ.

ಶಾಸಕರ ಈ ವಿವಾದಾತ್ಮಕ ಹೇಳಿಕೆಯು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು, ಅತ್ಯಾಚಾರವನ್ನು ಯಾವುದೇ ರೂಪದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಇದು ಶಾಸಕರ ವೈಯಕ್ತಿಕ ಹೇಳಿಕೆಯಾಗಿದೆಯೇ ಹೊರತು ಪಕ್ಷದ ನಿಲುವಲ್ಲ ಎಂದು ಸ್ಪಷ್ಟಪಡಿಸಿ ಅಂತರ ಕಾಯ್ದುಕೊಂಡಿದ್ದಾರೆ.

https://x.com/thenewsdrill/status/2012435146931368121?ref_src=twsrc%5Etfw%7Ctwcamp%5Etweetembed%7Ctwterm%5E2012435146931368121%7Ctwgr%5E546a67cd31161d11932d497fe0d90ccf11d851ae%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Congress MLA Phool Singh Baraiya sparks controversy by blaming beautiful girls for rape
Share This Article
Facebook Twitter Copy Link Print
Previous Article ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ
Next Article ಮೈಸೂರಿನಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?