Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಗ್ ಬಾಸ್ ಸೀಸನ್ 12ರ ಫಿನಾಲೆ ಹಂತದಲ್ಲಿ, ಗಿಲ್ಲಿ ನಟ ಗೆಲ್ಲುವ ಹಾಟ್ ಫೇವರೀಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಅವರ ಅಭಿಮಾನ ಮುಗಿಲು ಮುಟ್ಟಿದ್ದು, ಒಂದು ವೇಳೆ ಗಿಲ್ಲಿ ಟ್ರೋಫಿ ಗೆಲ್ಲದಿದ್ದರೆ, ನಿರೂಪಕ ಕಿಚ್ಚ ಸುದೀಪ್ ಮಂಡ್ಯಕ್ಕೆ ಕಾಲಿಡಬಾರದು ಎಂದು ಸ್ಥಳೀಯ ಯುವಕರು ಎಚ್ಚರಿಕೆ ನೀಡಿದ್ದಾರೆ.ಗಿಲ್ಲಿ ನಟ ಬಿಗ್ ಬಾಸ್ ಮನೆಯೊಳಗೆ ಹೋದಾಗಿನಿಂದ ಅವನ ಗೆಲುವಿಗಾಗಿ ಜಿಲ್ಲೆಯ ಜನರು ಭಾರೀ ಅಭಿಮಾನ ಪ್ರದರ್ಶನ ಮಾಡುತ್ತಿದ್ದಾರೆ. ಇನ್ನು ಬಿಗ್ ಬಾಸ್ ಫಿನಾಲೆ ವಾರ ಆರಂಭವಾಗುತ್ತಿದ್ದಂತೆ ಗಿಲ್ಲಿ ಪರವಾಗಿ ಜಿಯೋ ಹಾಟ್ ಸ್ಟಾರ್ ಆಪ್ ಮೂಲಕ ವೋಟ್ ಮಾಡುವುದಕ್ಕೆ ಭಾರೀ ದೊಡ್ಡ ಮಟ್ಟದ ಅಭಿಯಾನವನ್ನೇ ಆರಂಭಿಸಿದ್ದಾರೆ. ಸ್ವತಃ ಗಿಲ್ಲಿ ನಟ ಅವರ ಗ್ರಾಮ ದಡದನಪುರ ಬರುವ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕೂಡ ಗಿಲ್ಲಿ ನಟ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ್ದರು.ಮಂಡ್ಯದಲ್ಲಿ ಮೈಕ್ ಹಿಡಿದು ಗಿಲ್ಲಿ ಗೆಲುವಿನ ಬಗ್ಗೆ ಮಾತನಾಡಿಸಿದ ಖಾಸಗಿ ವಾಹಿನಿಯೊಂದರ ಮುಂದೆ, ‘ಗಿಲ್ಲಿ ನಟ ಅವರು ಬಿಗ್ ಬಾಸ್ ಟ್ರೋಫಿಯನ್ನು ಗೆಲ್ಲಲಿಲ್ಲವೆಂದರೆ ಸುದೀಪ್ ಅವರು ಮಂಡ್ಯ ಜಿಲ್ಲೆಗೆ ಬರುವಂತಿಲ್ಲ. ಇದಂತೂ ಸತ್ಯ, ನನ್ನ ಅಭಿಪ್ರಾಯ ಸುದೀಪ್ ಮಂಡ್ಯಕ್ಕೆ ಕಾಲಿಡುವಂತಿಲ್ಲ’ ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇದು ಗಿಲ್ಲಿ ನಟನ ಮೇಲಿನ ಕುರುಡು ಅಭಿಮಾನ ಎಂದು ಕೆಲವರು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆಮಂಡ್ಯ ಜಿಲ್ಲೆಯಲ್ಲಿ ನಟ ಅಂಬರೀಶ್ ಅವರನ್ನು ಬಿಟ್ಟರೆ ಬೇರೆ ಯಾವ ನಟ ಅಥವಾ ನಟಿಯರಿಗೂ ಇಷ್ಟೊಂದು ದೊಡ್ಡ ಮಟ್ಟದ ಅಭಿಮಾನವನ್ನು ಪ್ರದರ್ಶನ ಮಾಡಿದ್ದು ನೋಡಿಲ್ಲ. ದರ್ಶನ್ ತೂಗುದೀಪ ಹಾಗೂ ಯಶ್ ಅವರು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ಇದಕ್ಕೂ ಮುನ್ನ ಅಂಬರೀಶ್ ಅವರು ಮೃತಪಟ್ಟಾಗ ಮಂಡ್ಯದಲ್ಲಿಯೇ ಇಬ್ಬರೂ ಸ್ಟಾರ್ ನಟರು ಠಿಕಾಣಿ ಹೂಡಿ, ಅಂತ್ಯಕ್ರಿಯೆಗೆ ಹೆಗಲು ಕೊಟ್ಟಿದ್ದರು. ಆಗಲೂ ಇಷ್ಟು ದೊಡ್ಡ ಮಟ್ಟದಲ್ಲಿ ಅಭಿಮಾನ ವ್ಯಕ್ತವಾಗಿರಲಿಲ್ಲ