newsics.com
ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಶೇಖ್ ಹಸೀನಾ ಅವರು ಭಾರತಕ್ಕೆ ಬಂದಿದ್ದಾರೆ.ಹಸೀನಾ ಅವರ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ವಸ್ತುಗಳನ್ನೆಲ್ಲ ಲೂಟಿ ಮಾಡಿದ್ದಾರೆ.
ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಆಕೆ ತನ್ನ ಸಹೋದರಿಯೊಂದಿಗೆ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಈ ವೇಳೆ ಶೇಖ್ ಹಸೀನಾ ಅವರ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ವಸ್ತುಗಳನ್ನೆಲ್ಲ ಲೂಟಿ ಮಾಡಿದ್ದಾರೆ. ಬೆಡ್ ರೂಂನಲ್ಲಿ ಮಲಗಿ ವಿಡಿಯೋ ಮಾಡಿಕೊಂಡಿದ್ದಾರೆ.
ಢಾಕಾದಲ್ಲಿರುವ ಪಿಎಂ ಪ್ಯಾಲೇಸ್‌ಗೆ ನುಗ್ಗಿದ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಸೀರೆ, ಒಳಉಡುಪನ್ನೂ ಕದ್ದು, ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಸೋಫಾ, ಅಡುಗೆಮನೆಯಿಂದ ಹಸಿ ಮೀನು, ಕೋಳಿ, ಬಾತುಕೋಳಿ ಕದ್ದು, ಅಲ್ಲಿದ್ದ ಊಟ ಮಾಡಿ, ಶೇಖ್ ಹಸೀನಾ ಅವರ ಬೆಡ್ರೂಂನಲ್ಲಿ ಮಲಗಿ ಮಜಾ ಮಾಡಿದ್ದಾರೆ.
ಜನರು ಶೇಖ್ ಹಸೀನಾ ಅವರ ಕುಟುಂಬದ ಪೂರ್ವಜರ ಮನೆಯಾಗಿ ಪರಿವರ್ತನೆಗೊಂಡ ವಸ್ತುಸಂಗ್ರಹಾಲಯವನ್ನು ಧ್ವಂಸಗೊಳಿಸಿದೆ. ಅಲ್ಲಿ ಆಕೆಯ ತಂದೆಯ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಹಾಗೆಯೇ ದೇಶದ ಮುಖ್ಯ ನ್ಯಾಯಾಧೀಶರ ಮನೆ ಮತ್ತು ರಾಜಧಾನಿಯಾದ ಢಾಕಾದಲ್ಲಿರುವ ಶೇಖ್ ಹಸೀನಾ ಅವರ ಬಂಗಲೆಯ ಮೇಲೂ ದಾಳಿ ನಡೆಸಿ, ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.
https://twitter.com/TacticalTribun/status/1820409617366597841