Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.
ಈ ಹಿಂದೆ ತಮ್ಮ ಮಲಮಗಳು, ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಅವರನ್ನು ರಾಜ್ಯ ಸರ್ಕಾರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮರುನೇಮಕ ಮಾಡಿತ್ತು.
ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲೂ ರಾಮಚಂದ್ರರಾವ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆಗ ಸರ್ಕಾರಕ್ಕೆ ಮುಜುಗರ ಆಗಿತ್ತು. ಈಗ ರಾಸಲೀಲೆ ವಿಡಿಯೋ ವೈರಲ್ ಆಗುತ್ತಲೇ ಮತ್ತೆ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.
ವಿಡಿಯೋ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಲು ರಾಮಚಂದ್ರ ರಾವ್ ಇಂದು ಪರಮೇಶ್ವರ್ ಕಚೇರಿಗೆ ಆಗಮಿಸಿದ್ದರು. ಮನೆ ಒಳಗೆ ರಾಮಚಂದ್ರ ರಾವ್ ಹೋಗುವ ಮುನ್ನವೇ ಪರಮೇಶ್ವರ್ ಅವರು ಭೇಟಿಗೆ ನಿರಾಕರಿಸಿದರು. ಸಿಬ್ಬಂದಿ ಮೂಲಕ ಭೇಟಿ ಆಗುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದ್ದರು. ಹೀಗಾಗಿ 5 ನಿಮಿಷದಲ್ಲೇ ರಾಮಚಂದ್ರ ರಾವ್ ಪರಮೇಶ್ವರ್ ಕಚೇರಿಯಿಂದ ತೆರಳಿದರು.
ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಬಗ್ಗೆ ಟೀಕೆಗಳ ಹಿಂದಿನ ಕಾರಣವೇನು?