Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 10 ದಿನ ರಜೆ ಹಾಕಿರುವ ರಾಮಚಂದ್ರ ರಾವ್ ಕಾನೂನಾತ್ಮಕ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ಚರ್ಚಿಸಲಿದ್ದಾರೆ.
ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರ ರಾವ್ ಅವರು ಮಹಿಳೆಯೊಬ್ಬರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ದೃಶ್ಯದ ತುಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.ಣುಕು ಈಗ ಹೊರಬಂದಿದೆ.
https://www.newsics.com/2026/01/20/rfo-found-dead-in-hotel-room-friend-escapes/