Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ
ಪ್ರಮುಖಮನರಂಜನೆ

ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಲು ನಿರಾಕರಿಸಿ ವಾಪಸ್ ನೀಡಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಆಗಮಿಸುತ್ತಿದ್ದ ವೇಳೆ ಕೆಲ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಸಲ್ಲಿಸಲು ಮುಂದಾದರು. ಇದೇ ಸಂದರ್ಭದಲ್ಲಿ ಅಭಿಮಾನಿಯೊಬ್ಬರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಸಿಎಂಗೆ ನೀಡಿದರು. ಆದರೆ ಸಿಎಂ ಸಿದ್ದರಾಮಯ್ಯ ಅವರು ಫೋಟೋವನ್ನು ಸ್ವೀಕರಿಸದೇ ಅದನ್ನೇ ವಾಪಸ್ ನೀಡಿ, ಆತನನ್ನು ದುರುಗುಟ್ಟಿ ನೋಡಿದ್ದಾರೆ ಎನ್ನಲಾಗಿದೆ. ಇದಕ್ಕೆ ವಿರುದ್ಧವಾಗಿ, ಚಾಣಕ್ಯನ ಕುರಿತ ಪುಸ್ತಕವನ್ನು ಮತ್ತೊಬ್ಬ ಅಭಿಮಾನಿ ನೀಡಿದಾಗ ಅದನ್ನು ಸಿಎಂ ಸ್ವೀಕರಿಸಿದ್ದಾರೆ. ಈ ಘಟನೆಯು ರಾಯರ ಫೋಟೋ ತಿರಸ್ಕಾರದ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ವಿಷಯದ ಬಗ್ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, “ಸಿದ್ದರಾಮಯ್ಯ ಅವರಿಗೆ ಹಿಂದೂ ದೇವರನ್ನು ಕಂಡರೆ ಆಗುವುದಿಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೂ ಅವರಿಗೆ ಇಷ್ಟವಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ. ಟಿಪ್ಪು ಜಯಂತಿ ಆಚರಣೆ ವೇಳೆ ಕೋಮು ಗಲಭೆಗಳು ನಡೆದವು. ಕೋಗಿಲು ಲೇಔಟ್‌ನಲ್ಲಿ ಮುಸ್ಲಿಮರಿಗೆ ಮನೆಗಳನ್ನು ನೀಡಿರುವುದು ಸೇರಿದಂತೆ ಇದು ಅವರ ನಿರಂತರ ಪ್ರಕ್ರಿಯೆ” ಎಂದು ಕಿಡಿಕಾರಿದರು.
ಇದೇ ವಿಚಾರಕ್ಕೆ ಸಂಬಂಧಿಸಿ ನಟ ಜಗ್ಗೇಶ್ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ರಾಯರನ್ನ ಅಪಮಾನ ಮಾಡಿದವರು ಉದ್ಧಾರವಾದ ಇತಿಹಾಸವಿಲ್ಲ. ರಾಯರ ಸಣ್ಣ ಕೃಪೆ ನಮ್ಮ ಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತರು ಜಪ, ತಪ, ವೈರಾಗ್ಯ, ಉಪವಾಸದಿಂದ ಸೇವೆ ಮಾಡುತ್ತಾರೆ. ಭಕ್ತಿಯಿಂದ ನೀಡಿದ ಫೋಟೋವನ್ನು ಈ ರೀತಿ ತಿರಸ್ಕರಿಸಿದ ಪ್ರಥಮ ವ್ಯಕ್ತಿಯನ್ನು ನಾನು ನನ್ನ ಬದುಕಿನಲ್ಲಿ ನೋಡಿದ್ದೇನೆ. ರಾಯರಿದ್ದಾರೆ, ಅವರು ಎದ್ದು ಬರುತ್ತಾರೆ – ಕಾಯಬೇಕು” ಎಂದು ಅವರು ಬರೆದುಕೊಂಡಿದ್ದಾರೆ.

https://x.com/Jaggesh2/status/2013441542225100927?ref_src=twsrc%5Etfw%7Ctwcamp%5Etweetembed%7Ctwterm%5E2013441542225100927%7Ctwgr%5E480c846a99db94a2e1d9b302023544926534c698%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬೀಚ್‌ನಲ್ಲಿ ನಯನತಾರಾ-ತ್ರಿಷಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

TAGGED:Jaggesh lashes out at CM Siddaramaiah for rejecting Raghavendra Swamy's photo
Share This Article
Facebook Twitter Copy Link Print
Previous Article ಬೀಚ್‌ನಲ್ಲಿ ನಯನತಾರಾ-ತ್ರಿಷಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ
Next Article ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣವೇನು?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?