Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ನಟ ಕಿಚ್ಚ ಸುದೀಪ್ ಮತ್ತು ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ಅವರ ವಿರುದ್ಧ ವ್ಯಕ್ತಿಯೊಬ್ಬರು ವಂಚನೆ ಆರೋಪ ಮಾಡಿದ್ದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
ನನಗೆ 90 ಲಕ್ಷ ನೀಡುವುದಾಗಿ ನಂಬಿಸಿ, ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ಚಿಕ್ಕಮಗಳೂರು ಮೂಲದ ವ್ಯಕ್ತಿ, ಕಾಫಿ ತೋಟದ ಮಾಲೀಕ ದೀಪಕ್ ಎಂಬುವವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ದೂರಿನಲ್ಲಿ ದೀಪಕ್ ಆರೋಪಿಸಿರುವಂತೆ, ವಾರಸ್ದಾರ ಎಂಬ ಧಾರವಾಹಿ ಚಿತ್ರೀಕರಣಕ್ಕಾಗಿ ತಮ್ಮ ಕಾಫಿ ತೋಟ ಹಾಗೂ ಮನೆಯನ್ನು ಎರಡು ವರ್ಷಗಳಿಗೆ ಅಗ್ರಿಮೆಂಟ್ ಮಾಡಿಸಿ ಬಾಡಿಗೆಗೆ ಪಡೆದುಕೊಂಡಿದ್ದರು. ಆದರೆ ಕೇವಲ ಎರಡೇ ತಿಂಗಳಿಗೆ ಜಾಗ ಖಾಲಿ ಮಾಡಿದ್ದು,ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಈ ಎರಡು ತಿಂಗಳ ಅವಧಿಯಲ್ಲಿ ಸೀರಿಯಲ್ ಶೂಟಿಂಗ್ ನೆಪದಲ್ಲಿ ತಮ್ಮ ತೋಟದಲ್ಲಿ ಕಾಫಿ ಗಿಡಗಳು ಹಾಗೂ ಮರಗಳನ್ನು ನಾಶ ಮಾಡಿದ್ದಾರೆ. ಹೀಗಾಗಿ ತಮಗೆ ನಷ್ಟವಾಗಿದ್ದು, 95 ಲಕ್ಷ ಪರಿಹಾರ ನೀಡುವಂತೆ ದೀಪಕ್ ಕೇಳಿದ್ದರು.
ಈ ವೇಳೆ ಸುದೀಪ್ ಅವರು 60 ಲಕ್ಷ ನೀಡುವುದಾಗಿ ಭರವಸೆ ನೀಡಿ ರಾಜಿ ಮಾಡಿಕೊಂಡಿದ್ದರು ಎಂದಿದ್ದಾರೆ. ಆದ್ರೆ ದೀಪಕ್‌ಗೆ ಇದುವರೆಗೂ 10 ಲಕ್ಷದ ಚೆಕ್ ಮಾತ್ರವೇ ನೀಡಲಾಗಿದ್ದು, ಬಾಕಿ ಹಣ ನೀಡದೆ ಸತಾಯಿಸುತ್ತಿದ್ದು, ನಟ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ತಮಗೆ ಪರಿಹಾರ ಕೊಡಿಸಬೇಕು ಎಂದು ದೀಪಕ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.