Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರಿನ ಹೆಬ್ಬಗೋಡಿ ಬಳಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ ಒಣಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ. ಹೊರಗಡೆ ಸುತ್ತಾಡಿ ಮನೆಗಳನ್ನು ದೂರದಿಂದಲೇ ಪರಿಶೀಲನೆ ಮಾಡುತ್ತಿದ್ದ. ನಂತರ ಯಾರು ಇಲ್ಲದ ವೇಳೆ ನುಗ್ಗಿ ಒಳ ಉಡುಪುಗಳನ್ನ ಕದ್ದೊಯ್ಯುತ್ತಿದ್ದ. ಬಳಿಕ ಅವುಗಳನ್ನು ತಾನು ಧರಿಸಿಕೊಂಡು ಫೋಟೋ ತೆಗೆದುಕೊಂಡು ವಿಕೃತ ಆನಂದ ಪಡುತ್ತಿದ್ದ ಎಂದು ತಿಳಿದುಬಂದಿದೆ.
ಆರೋಪಿಯ ಮೊಬೈಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಅಮಲ್ ವಾಸವಾಗಿದ್ದ ಮನೆಯಲ್ಲಿಯೂ ಮಹಿಳೆಯರ ಒಳಉಡುಪುಗಳು ಪತ್ತೆಯಾಗಿವೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.newsics.com/2026/01/21/how-much-shopping-did-kavya-do-to-go-on-bigg-boss/