Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಡೀಸೆಲ್ ಕಳ್ಳಸಾಗಣೆ ಮಾಡುತ್ತಿರುವ ಭಾರೀ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಮೇಲೆ ಮಾಳಮಾರುತಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾಗ ಡೀಸೆಲ್ ಕಳ್ಳಸಾಗಣೆ ಬೆಳಕಿಗೆ ಬಂದಿದೆ.
ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಯಾವುದೇ ದಾಖಲೆಯಿಲ್ಲದೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸಲಾಗುತ್ತಿರುವುದು ಪತ್ತೆಯಾಗಿದೆ.
17 ಲಕ್ಷ ರೂ. ಮೌಲ್ಯದ ಡೀಸೆಲ್ ಜಪ್ತಿ
ದಾಳಿಯ ವೇಳೆ ಸುಮಾರು 17 ಲಕ್ಷ ರೂ. ಮೌಲ್ಯದ 17 ಸಾವಿರ ಲೀಟರ್ ಡೀಸೆಲ್ ಹಾಗೂ ಟ್ಯಾಂಕರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆ ವೇಳೆ, ತುಮಕೂರು ಮೂಲದ ಟ್ಯಾಂಕರ್ ಮಾಲೀಕ ಅರಿಹಂತ ಎಂಬಾತನ ಪಾತ್ರ ಬೆಳಕಿಗೆ ಬಂದಿದ್ದು, ಇದು ದೊಡ್ಡ ಮಟ್ಟದ ಸ್ಮಗ್ಲಿಂಗ್ ಜಾಲವಾಗಿರುವುದು ಸ್ಪಷ್ಟವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಲ್ಫ್ ದೇಶಗಳಿಂದ ಅಕ್ರಮವಾಗಿ ತೈಲ ಉತ್ಪನ್ನಗಳನ್ನು ಭಾರತಕ್ಕೆ ತರಲಾಗುತ್ತಿದ್ದು, ಈ ಜಾಲದಲ್ಲಿ ಮಹಾರಾಷ್ಟ್ರ ಹಾಗೂ ರಾಜಸ್ಥಾನದ ಖದೀಮರು ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಇಷ್ಟು ವರ್ಷಗಳ ಕಾಲ ಈ ತೈಲ ಕಳ್ಳಸಾಗಣೆ ದಂಧೆ ನಡೆಯುತ್ತಿದ್ದರೂ ಯಾರಿಗೂ ಗೊತ್ತಾಗಿರಲಿಲ್ಲ ಎಂಬುದು ಅಚ್ಚರಿ ಮೂಡಿಸಿದೆ.
ಗಲ್ಫ್ ದೇಶಗಳಿಂದ ಹಡಗುಗಳ ಮೂಲಕ ಡೀಸೆಲ್ ಕಳ್ಳಸಾಗಣೆ
ಮೂಲಗಳ ಮಾಹಿತಿ ಪ್ರಕಾರ, ಗಲ್ಫ್ ದೇಶಗಳಿಂದ ಹಡಗುಗಳ ಮೂಲಕ ತೈಲ ನಿಗಮಗಳಿಗೆ ಪೆಟ್ರೋಲಿಯಂ ಉತ್ಪನ್ನಗಳು ಸಾಗಾಟವಾಗುತ್ತಿತ್ತು. ಕೆಲ ಹಡಗು ಮಾಲೀಕರು ಈ ಅಕ್ರಮ ಜಾಲದೊಂದಿಗೆ ಶಾಮೀಲಾಗಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಗಲ್ಫ್ ದೇಶಗಳ ತೈಲ ಉತ್ಪಾದಕರೊಂದಿಗೆ ಸ್ಮಗ್ಲರ್‌ಗಳು ನೇರ ಸಂಪರ್ಕ ಹೊಂದಿರುವ ಅನುಮಾನವೂ ವ್ಯಕ್ತವಾಗಿದೆ.
ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ; ಮೃತದೇಹವನ್ನು ಪೀಸ್ ಮಾಡಿ ಎಸೆದ ದುಷ್ಕರ್ಮಿಗಳು