Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿರತೆ ದಾಳಿಗೆ ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ
ಕರ್ನಾಟಕಪ್ರಮುಖ

ಚಿರತೆ ದಾಳಿಗೆ ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ. ಪಾದಯಾತ್ರೆ ಹೊರಟಿದ್ದ ಐವರು ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ.
ತಾಳಬೆಟ್ಟದ ಕಂದಕದಲ್ಲಿ ಪ್ರವೀಣ್ ಶವ ಪತ್ತೆಯಾಗಿದ್ದು, ಮಾದಪ್ಪನ ಭಕ್ತನ ಕೊಂದ ನರಭಕ್ಷಕ ಚಿರತೆ ಆತನ ರಕ್ತ ಹೀರಿದೆ. ಸುಮಾರು 1 ಕಿ.ಮೀ. ಕಾಡಿನೊಳಗೆ ಚಿರತೆ ಶವ ಎಳೆದುಕೊಂಡು ಹೋಗಿದ್ದು, ಶವ ಪತ್ತೆ ವೇಳೆಯೂ ಪ್ರವೀಣ್ ಮೃತದೇಹದ ಪಕ್ಕದಲ್ಲೇ ಕುಳಿತಿತ್ತು. ಹೀಗಾಗಿ ಶವ ಹೊರತೆಗೆಯಲು ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಂತಿಮವಾಗಿ ಪಟಾಕಿ ಸಿಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಓಡಿಸಿದ್ದು, ಸದ್ಯ ಮರಣೋತ್ತರ ಪರೀಕ್ಷೆಗಾಗಿ ಹನೂರು ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಬೆಳಗಿನ ಜಾವ 5.30ಕ್ಕೆ ತೆರಳುವಂತೆ ನಮಗೆ ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದರು. ನಾವು 6 ಗಂಟೆ ವೇಳೆಗೆ ಹೋಗುತ್ತಿದ್ದ ವೇಳೆ ಚಿರತೆ ಕಾಣಿಸಿದ್ದು, ಸ್ಥಳದಿಂದ ಓಡಲು ಆರಂಭಿಸಿದ್ದೆವು. ಚಿರತೆ ಚಿರತೆ ಎಂದು ಕಿರುಚಾಡಿದ್ದೆವು ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಪ್ರವೀಣ್ ಬಲಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ 4 ದಿನಗಳ ಕಾಲ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಅರಣ್ಯಾಧಿಕಾರಿಗಳು ಆದೇಶಿಸಿದ್ದಾರೆ. ಚಿರತೆ ಹಿಡಿಯುವವರೆಗೆ 4 ದಿನಗಳ ಕಾಲ ಪಾದಯಾತ್ರೆ ನಿರ್ಬಂಧ ಇರಲಿದೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಕೆಲ ದಿನಗಳ ಹಿಂದೆಯೂ ಕಾಣಿಸಿಕೊಂಡಿತ್ತು. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತ ದೃಶ್ಯವನ್ನು ಭಕ್ತರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಆಗಮಿಸುವುದರಿಂದ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಮನವಿಯನ್ನೂ ಸಲ್ಲಿಸಲಾಗಿತ್ತು.

ಬಸ್‌ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ಕೇರಳದ ದೀಪಕ್ ಆತ್ಮ*ಹ*ತ್ಯೆಗೆ ಕಾರಣಳಾಗಿದ್ದ ಶಿಮ್ಕಿತಾ ಬಂಧನ

TAGGED:Devotee on his way to Male Mahadeshwara temple dies in leopard attack; hiking banned for 4 days
Share This Article
Facebook Twitter Copy Link Print
Previous Article ಬಸ್‌ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ಕೇರಳದ ದೀಪಕ್ ಆತ್ಮ*ಹ*ತ್ಯೆಗೆ ಕಾರಣಳಾಗಿದ್ದ ಶಿಮ್ಕಿತಾ ಬಂಧನ
Next Article ಇನ್ಮುಂದೆ ಪಿಯುಸಿ ಮಕ್ಕಳ ಸ್ಟಡಿ ಹಾಲಿಡೇಗೆ ಬ್ರೇಕ್; ಕಾರಣವೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?