Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೇಗಿದೆ ಅಂಬಾರಿ ಡಬಲ್ ಡೆಕ್ಕರ್ ಬಸ್?
ಕರ್ನಾಟಕಪ್ರಮುಖ

ಹೇಗಿದೆ ಅಂಬಾರಿ ಡಬಲ್ ಡೆಕ್ಕರ್ ಬಸ್?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಸೇವೆ ಪ್ರವಾಸಿಗರಿಗೆ ಆರಂಭವಾಗಿದೆ.
ಬೆಂಗಳೂರು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆ ರಾಜಧಾನಿಗೆ ಅಂಬಾರಿ ಡಬಲ್ ಡೆಕ್ಕರ್ ಬಸ್ ಆಗಮನವಾಗಿದೆ. ಕೆಎಸ್‌ಟಿಡಿಸಿಯ ಬಸ್‌ಗಳಿಗೆ ಇಂದು ಚಾಲನೆ ನೀಡಲಾಗಿದೆ.

ಪ್ರಯಾಣಿಕರು ಕೆಎಸ್‌ಟಿಡಿಸಿ ವೆಬ್‌ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು.
ಡಬಲ್ ಡೆಕ್ಕರ್ ಬಸ್ ಸೇವೆಗೆ ರಾಜ್ಯ ಸರ್ಕಾರದ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಚಾಲನೆ ನೀಡಿದ್ದಾರೆ. ಹಸಿರು ನಿಶಾನೆ ತೋರಿಸುವ ಮೂಲಕ 3 ಬಸ್ ಗಳಿಗೆ ಸಚಿವ ಎಚ್‌.ಕೆ.ಪಾಟೀಲ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮುಂಭಾಗದಲ್ಲಿ ನೂತನವಾಗಿ 3 ಡಬ್ಬಲ್ ಡೆಕ್ಕರ್ ಬಸ್‌ಗೆ ಚಾಲನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಒಟ್ಟು 3 ಡಬಲ್ ಡೆಕ್ಕರ್ ಬಸ್ ಸೇವೆಯನ್ನು ಪ್ರವಾಸಿಗರಿಗಾಗಿ ನೀಡಲಾಗುತ್ತಿದೆ.

ಮೈಸೂರು ದಸರಾ ವೇಳೆ ಡಬಲ್ ಡೆಕ್ಕರ್ ಬಸ್ ಗಳು ಜನಪ್ರಿಯವಾಗಿದ್ದವು. ಇದೀಗ ಬೆಂಗಳೂರಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು 3 ಡಬಲ್ ಡೆಕ್ಕರ್ ಬಸ್ ಗಳು ಸಜ್ಜಾಗಿವೆ. ಬೆಂಗಳೂರಿನ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸಲು ಡಬಲ್ ಡೆಕ್ಕರ್ ಬಸ್ ಸೇವೆ ಶುರು ಮಾಡಲಾಗಿದೆ.
ಅಂಬಾರಿ ಡಬಲ್ ಡೆಕ್ಕರ್ ಬಸ್‌ನೊಳಗೆ 20+20 ಆಸನಗಳನ್ನು ಹೊಂದಿದೆ. ಕೆಳಭಾಗದಲ್ಲಿ 20 ಮತ್ತು ಮೇಲ್ಭಾಗದಲ್ಲಿ ನಿಮಗೆ 20 ಆಸನಗಳಿವೆ. ಕೆಳಭಾಗ ಸಂಪೂರ್ಣ ಹವಾನಿಯಂತ್ರಿತವಾಗಿದೆ. ಮೇಲ್ಭಾಗದಲ್ಲಿ 20 ಆಸನಗಳನ್ನು ಅಳವಡಿಸಲಾಗಿದ್ದು, ಇಲ್ಲಿ ಛಾವಣಿ ಇಲ್ಲ. ಹಾಗಾಗಿ ತೆರೆದ ವಾಹನದಲ್ಲಿ ಕುಳಿತು ಬೆಂಗಳೂರಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳಬಹುದು.
ಇದಾದ ಬಳಿಕ ವಿಶೇಷ ಸಂದರ್ಭಗಳಲ್ಲಿಯೂ ಡಬಲ್ ಡೆಕ್ಕರ್ ಬಸ್ ಬಳಕೆಯಾಗಿತ್ತು. ಇದೀಗ ದಿನನಿತ್ಯ ಡಬಲ್ ಡೆಕ್ಕರ್ ಬಸ್‌ಗಳು ಬೆಂಗಳೂರಿನಲ್ಲಿ ಸಂಚರಿಸಲಿವೆ. ಈ ಬಸ್‌ಗಳಲ್ಲಿ ನೀವು ಪ್ರಯಾಣಿಸಬೇಕಾದ್ರೆ ಕೆಎಸ್‌ಟಿಡಿಸಿ ವೆಬ್‌ಸೈಟ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ.
ಬಸ್ ಪ್ರಯಾಣ ದರ 180 ರೂಪಾಯಿ ನಿಗದಿಪಡಿಸಲಾಗಿದೆ. ರವೀಂದ್ರ ಕಲಾಕ್ಷೇತ್ರದಿಂದ ಆರಂಭವಾಗುವ ಪ್ರಯಾಣ ಹಡ್ಸನ್ ಸರ್ಕಲ್ , ಕ್ವೀನ್ಸ್ ರೋಡ್, ವಿಶ್ವೇಶರ ಮ್ಯೂಸಿಯಂ, ವಿಧಾನಸೌಧ ಮುಂಭಾಗದ ರಸ್ತೆ, ಕೆಆರ್ ಸರ್ಕಲ್ ಮೂಲಕ ಬಂದು ಕಾರ್ಪೋರೇಷನ್ ಸಿಗ್ನಲ್‌ನಲ್ಲಿ ಮುಕ್ತಾಯವಾಗುತ್ತದೆ. ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಈ ಸೇವೆ ಲಭ್ಯವಿರುತ್ತದೆ.

2 ಗಂಟೆ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಜೋಡಿ; ಆಮೇಲೆನಾಯ್ತು? ; ವೈರಲ್ ವಿಡಿಯೋ ನೋಡಿ

TAGGED:How is the Ambari double-decker bus?
Share This Article
Facebook Twitter Copy Link Print
Previous Article 2 ಗಂಟೆ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಜೋಡಿ; ಆಮೇಲೆನಾಯ್ತು? ; ವೈರಲ್ ವಿಡಿಯೋ ನೋಡಿ
Next Article ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಗೆಹ್ಲೋಟ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?