newsics.com
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಮಂಗಳವಾರ(ಆ.6) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಿಂಗಳಾಗುವ ಮೊದಲೇ ಮತ್ತೆ ಅಸ್ವಸ್ಥರಾಗಿದ್ದಾರೆ. ಅನಾರೋಗ್ಯದ ಕಾರಣ ಮಂಗಳವಾರ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರಿಗೆ ನರರೋಗ ತಜ್ಞ ಡಾ., ವಿನಿತ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.
ಜುಲೈನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗುವ ಮೊದಲು ಅಡ್ವಾಣಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೂಡ ದಾಖಲಾಗಿದ್ದರು.
ಸುಮಾರು ಮೂರು ದಶಕಗಳ ಸಂಸದೀಯ ವೃತ್ತಿಜೀವನವನ್ನು ಪೂರ್ಣಗೊಳಿಸಿದ ಅಡ್ವಾಣಿ 1999 ರಿಂದ 2004ರವರೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಮೊದಲು ಗೃಹ ಸಚಿವರಾಗಿದ್ದರು ನಂತರ ಉಪ ಪ್ರಧಾನಿಯಾಗಿದ್ದರು.
NASA ಲೇಟ್ ಮಾಡಿದ್ರೆ ಸುನಿತಾ ವಿಲಿಯಮ್ಸ್ ಪ್ರಾಣಕ್ಕೆ ಕಂಟಕ! 14 ದಿನದಲ್ಲಿ ಭೂಮಿಗೆ ಕರೆತರಲೇಬೇಕು…
ಜೀವಭಯದಲ್ಲಿದ್ದ ಹಸೀನಾಗೆ ಭದ್ರತೆ ನೀಡಿದ್ದೇ ಭಾರತದ ರಫೇಲ್ ಯುದ್ಧ ವಿಮಾನಗಳು!