Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಬೃಹತ್ ಯುಎಸ್ ಸೇನೆಯನ್ನು ಇರಾನ್ ಕಡೆಗೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಟ್ರಂಪ್ ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ್ದಾರೆ. ಇರಾನ್ ಸಹ ಇದಕ್ಕೆ ಕಠಿಣ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧವೆಂದು ಘೋಷಿಸಿದೆ. ಇದು ಅಮೆರಿಕಾ ಮತ್ತು ಇರಾನ್ ನಡುವೆ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಆರ್ಥಿಕ ಸಂಕಷ್ಟದ ಕುರಿತು ಡಿಸೆಂಬರ್ ಅಂತ್ಯದಲ್ಲಿ ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು, ನಂತರ ಅದು ರಾಷ್ಟ್ರವ್ಯಾಪಿ ಹರಡಿತ್ತು. ಎರಡು ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬಲವಾದ ಎಚ್ಚರಿಕೆ ನೀಡಿದ್ದರು.