Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ಎಂಬಾಕೆ ಪೊಲೀಸರಿಗೆ ದೂರು ನೀಡಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಜಹೀದ್, ಅಬೀದ್ ಅಹ್ಮದ್, ಶೇಕ್ ಸಕೀಬ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ನೈತಿಕ ಪೊಲೀಸ್‌ಗಿರಿಗೆ ಘಟನೆಗೆ ಸಂಬಂಧಿಸಿದಂತೆ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ತನ್ನ ಸೋದರ ರಫಿ ಜೊತೆ ತಾನು ಇದ್ದಾಗ ನಮ್ಮ ಜೊತೆಗೆ ಇದ್ದ ರಾಹುಲ್, ಪುರುಷೋತಮ್, ಲಾವಣ್ಯ ಮತ್ತು ಸಂಜಯ್ ಎಂಬುವವರ ಮೇಲೆ ಈ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಚಾಂದಿನಿ ದೂರು ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://www.newsics.com/2026/01/23/government-plans-to-provide-menstrual-cups-to-female-students/