Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಜೆ ಹಾಕಿದ ಯುವತಿಗೆ ಬಟ್ಟೆ ಬಿಚ್ಚಿ ಹೊಡಿತೀನೆಂದ ಮಾಲೀಕ; ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ರಜೆ ಹಾಕಿದ ಯುವತಿಗೆ ಬಟ್ಟೆ ಬಿಚ್ಚಿ ಹೊಡಿತೀನೆಂದ ಮಾಲೀಕ; ಆರೋಪಿ ಅರೆಸ್ಟ್

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ ಸೈಬರ್ ಸೆಂಟರ್ ಮಾಲೀಕನೋರ್ವ ಯುವತಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಘಟನೆಯ ವಿವರ
ಕಳೆದ ಐದು ವರ್ಷಗಳಿಂದ ಲಕ್ಷ್ಮಿ ಎಂಬ ಯುವತಿ ಕೆಂಗೇರಿಯಲ್ಲಿರುವ ಸೈಯದ್ ಎಂಬುವವರಿಗೆ ಸೇರಿದ ‘ಮುಸ್ಕಾನ್ ಟೈಮ್ಸ್’ ಸೈಬರ್ ಸೆಂಟರ್‌ನಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ಆದರೆ, ವೈಯಕ್ತಿಕ ಕಾರಣಗಳಿಂದಾಗಿ ಲಕ್ಷ್ಮಿ ಅವರು ಕಳೆದ ಕೆಲವು ದಿನಗಳಿಂದ ಕೆಲಸಕ್ಕೆ ಗೈರಾಗಿದ್ದರು. ಇದರಿಂದ ತೀವ್ರವಾಗಿ ಕೆರಳಿದ್ದ ಮಾಲೀಕ ಸೈಯದ್, ಯುವತಿಯ ವಿರುದ್ಧ ದ್ವೇಷ ಸಾಧಿಸಲು ಶುರು ಮಾಡಿದ್ದ ಎನ್ನಲಾಗಿದೆ.

ನಡುರಸ್ತೆಯಲ್ಲಿ ಉದ್ದಟತನ
ಜನವರಿ 22 ರಂದು ರಾತ್ರಿ ಸುಮಾರು 7:30 ರ ಹೊತ್ತಿಗೆ ಲಕ್ಷ್ಮಿ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿದ ಸೈಯದ್ ಸಾರ್ವಜನಿಕವಾಗಿ ನಿಂದಿಸಲು ಶುರು ಮಾಡಿದ್ದಾನೆ. ‘ನಿನಗೆ ಬಟ್ಟೆ ಬಿಚ್ಚಿ ಹೊಡೆಯುತ್ತೇನೆ, ರಸ್ತೆಯಲ್ಲಿಯೇ ಕತ್ತರಿಸಿ ಹಾಕುತ್ತೇನೆ’ ಎಂಬ ಅತಿ ವಿಕೃತ ಮಾತುಗಳನ್ನಾಡಿ ಯುವತಿಯನ್ನು ಬೆದರಿಸಿದ್ದಾನೆ. ‘”ನಿನ್ನಿಂದ ನನ್ನ ದುಡ್ಡೆಲ್ಲಾ ಹೋಯಿತು, ನನ್ನ ತಲೆ ಕೆಡಿಸಬೇಡ’ ಎಂದು ಕೂಗಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಸದ್ಯ ಕೆಂಗೇರಿ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಸೈಯದ್ ಅರಚಾಟ ಮತ್ತು ಬೆದರಿಕೆ ಮಾತುಗಳನ್ನು ಕೇಳಿ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಆತನ ವರ್ತನೆಯನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಮಹಿಳೆಯ ಜೊತೆ ವರ್ತಿಸುವ ರೀತಿ ಇದಲ್ಲ ಎಂದು ಬುದ್ಧಿ ಹೇಳಿದ ಸ್ಥಳೀಯರು, ಸೈಯದ್‌ನನ್ನು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಕೆಂಗೇರಿ ಪೊಲೀಸರು ಆರೋಪಿ ಸೈಯದ್‌ನನ್ನು ವಶಕ್ಕೆ ಪಡೆದಿದ್ದಾರೆ.

ರಥ ಸಪ್ತಮಿಯಂದು ಸೂರ್ಯ ದೇವಸ್ಥಾನಗಳಿಗೆ ಭೇಟಿ ನೀಡುವ ಮಹತ್ವವೇನು?

TAGGED:Owner allegedly stripped and beat up young woman on leave; accused arrested
Share This Article
Facebook Twitter Copy Link Print
Previous Article ರಥ ಸಪ್ತಮಿಯಂದು ಸೂರ್ಯ ದೇವಸ್ಥಾನಗಳಿಗೆ ಭೇಟಿ ನೀಡುವ ಮಹತ್ವವೇನು?
Next Article ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟ ಧನಂಜಯ್‌, ಡಾಕ್ಟರ್‌ ಧನ್ಯತಾ ಜೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?