newsics.com
ಬೆಂಗಳೂರು: ನಗರದಲ್ಲಿ 15 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.
ಹೊಟ್ಟೆ ನೋವು ಎಂದು ನರಳಾಡುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಹೋದ ಪೋಷಕರು ತಮ್ಮ ಮಗಳು 7 ತಿಂಗಳ ಗರ್ಭಿಣಿ ಎಂಬುದನ್ನು ತಿಳಿದು ಬೆಚ್ಚಿಬಿದ್ದಿದ್ದಾರೆ.
ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಾ ಸ್ವಲ್ಪ ಫೇಮಸ್ ಆಗಿದ್ದ ಸಾದ್ ಮುಸೈಬ್ನಾ ಎಂಬಾತನ ಮೇಲೆ ಬಾಲಕಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. 15 ವರ್ಷದ ಮಗಳನ್ನು ನಂಬಿಸಿ, ಮನವೊಲಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ.
ಘಟನೆಗಳಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಪೋಷಕರು ಆಕೆಯನ್ನು ರಕ್ಷಿಸಿದ್ದಾರೆ. ಆರೋಪಿ ಸಾದ್ ಹಲವು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಾಲೆಗೆ ಬರುವ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಳಸಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿ ತಂದೆಯ ದೂರಿನನ್ವಯ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್