Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಕರ್ನಾಟಕಪ್ರಮುಖ

ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Share
2 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಪಿಎಸ್ಐ ನೇಮಕಾತಿ ಅಕ್ರಮ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED), ಪ್ರಕರಣದ ಪ್ರಮುಖ ಆರೋಪಿಗಳಿಗೆ ಬಿಸಿ ಮುಟ್ಟಿಸಿದೆ.

ಜನವರಿ 23, 2026 ರಂದು ಮಾಜಿ ಎಡಿಜಿಪಿ ಅಮೃತ್ ಪಾಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಎಚ್ ಅವರಿಗೆ ಸೇರಿದ ಒಟ್ಟು 1.53 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ನೇಮಕಾತಿ ವಿಭಾಗದ ಅಂದಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ ಅಮೃತ್ ಪಾಲ್ ಅವರು ಈ ಸಂಚಿನಲ್ಲಿ ಪ್ರಮುಖ ಪಾತ್ರ ವಹಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಓಎಂಆರ್ (OMR) ಉತ್ತರ ಪತ್ರಿಕೆಗಳನ್ನು ಇಡಲಾಗಿದ್ದ ಸ್ಟ್ರಾಂಗ್ ರೂಮ್‌ನ ಕೀಗಳನ್ನು ಅಮೃತ್ ಪಾಲ್ ಅವರು ಡಿವೈಎಸ್‌ಪಿ ಶಾಂತಕುಮಾರ್ ಅವರಿಗೆ ಹಸ್ತಾಂತರಿಸಿದ್ದರು. ಈ ಮೂಲಕ ಅನರ್ಹ ಅಭ್ಯರ್ಥಿಗಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳಲು ಓಎಂಆರ್ ಶೀಟ್‌ಗಳನ್ನು ತಿದ್ದಲು ಅವಕಾಶ ಮಾಡಿಕೊಡಲಾಗಿತ್ತು.
ಆರೋಪಿಗಳು ಒಬ್ಬೊಬ್ಬ ಅಭ್ಯರ್ಥಿಯಿಂದ 30 ಲಕ್ಷ ರೂಪಾಯಿಯಿಂದ 70 ಲಕ್ಷ ರೂಪಾಯಿ ವರೆಗೂ ಭಾರಿ ಪ್ರಮಾಣದ ಲಂಚದ ಹಣವನ್ನು ವಸೂಲಿ ಮಾಡಿದ್ದರು ಎಂಬ ಅಂಶ ಬಯಲಾಗಿದೆ. ಈ ರೀತಿ ಸಂಗ್ರಹಿಸಿದ ಅಕ್ರಮ ಹಣವನ್ನು ‘ಕೈಗಡ’ (Hand Loans) ಎಂಬ ಸೋಗಿನಲ್ಲಿ ಹಂತ ಹಂತವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಅಕ್ರಮ ಹಣದ ಮೂಲವನ್ನೇ ಬಳಸಿಕೊಂಡು ಆರೋಪಿಗಳು ವಸತಿ ಆಸ್ತಿಗಳನ್ನು ನಿರ್ಮಿಸಿದ್ದರು ಎಂದು ಇಡಿ ವರದಿಯಲ್ಲಿ ತಿಳಿಸಿದೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದ್ದು, ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆ ಅಪರಾಧವನ್ನು ಪರಿಗಣನೆಗೆ ತೆಗೆದುಕೊಂಡಿದೆ. ಸದ್ಯ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಅಮೃತ್ ಪಾಲ್ ಮತ್ತು ಶ್ರೀಧರ್ ಅವರ ವಸತಿ ಆಸ್ತಿಗಳು ಸೇರಿವೆ. ಪ್ರಕರಣದ ಕುರಿತು ಮತ್ತಷ್ಟು ತನಿಖೆ ಮುಂದುವರೆದಿದೆ.
2021-22ನೇ ಸಾಲಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆಸಲಾಗಿದ್ದ ಪರೀಕ್ಷೆಯಲ್ಲಿ ಬೃಹತ್ ಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮತ್ತು ಸಿಐಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧಾರದ ಮೇಲೆ ಇಡಿ ತನ್ನ ತನಿಖೆಯನ್ನು ಆರಂಭಿಸಿತ್ತು. ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ಭ್ರಷ್ಟಾಚಾರ ಮತ್ತು ವಂಚನೆಯ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾನ್ಸ್ಟೇಬಲ್; ಆರೋಪಿ ಅರೆಸ್ಟ್

TAGGED:PSI recruitment case: Property worth ₹1.53 crore of main accused seized
Share This Article
Facebook Twitter Copy Link Print
Previous Article ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾನ್ಸ್ಟೇಬಲ್; ಆರೋಪಿ ಅರೆಸ್ಟ್
Next Article ಗೆಲುವಿನ ಬೆನ್ನಲ್ಲೇ ಗಿಲ್ಲಿ ನಟ ರಾಜಕೀಯಕ್ಕೆ ಎಂಟ್ರಿ?; ಗಿಲ್ಲಿ ನಟ ಹೇಳಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?