Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದ್ಯಾರ್ಥಿನಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; FSL ವರದಿ ಹೇಳಿದ್ದೇನು?
ದೇಶಪ್ರಮುಖ

ವಿದ್ಯಾರ್ಥಿನಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; FSL ವರದಿ ಹೇಳಿದ್ದೇನು?

Share
2 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಹಾರದ ಪಾಟ್ನಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯ ನಿಗೂಢ ಸಾವಿನಲ್ಲಿ ಅತಿದೊಡ್ಡ ವಿಷಯ ಬೆಳಕಿಗೆ ಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯು ವಿದ್ಯಾರ್ಥಿನಿಯ ಒಳ ಉಡುಪಿನಲ್ಲಿ ವೀರ್ಯ ಇರುವುದನ್ನು ದೃಢಪಡಿಸಿದ್ದು, ಮರಣೋತ್ತರ ಪರೀಕ್ಷಾ ವರದಿಯು ಲೈಂಗಿಕ ದೌರ್ಜನ್ಯದ ಅನುಮಾನವನ್ನು ಮತ್ತಷ್ಟು ಬಲಪಡಿಸಿದೆ.
ಈ ವರದಿಯು ಬಿಹಾರ ಪೊಲೀಸರ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಷ್ಟೇ ಅಲ್ಲ, ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಇಬ್ಬರು ಆಫೀಸರ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಕಾಲದಲ್ಲಿ ಮಾಹಿತಿ ಸಂಗ್ರಹಿಸದಿರುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿರುವ ಆರೋಪ ಈ ಇಬ್ಬರ ಮೇಲಿದೆ.

ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿಯ ಬಟ್ಟೆಯ ಮೇಲೆ ಕಂಡುಬಂದ ಪುರಾವೆಗಳು ಲೈಂಗಿಕ ದೌರ್ಜನ್ಯವನ್ನು ಸೂಚಿಸುತ್ತವೆ ಎಂದು ವಿಧಿವಿಜ್ಞಾನ ವರದಿಯು ಸ್ಪಷ್ಟವಾಗಿ ಹೇಳುತ್ತದೆ. ಇದರರ್ಥ ಈ ಪ್ರಕರಣವು ಕೇವಲ ಅನುಮಾನಾಸ್ಪದ ಸಾವು ಅಥವಾ ಆತ್ಮ*ಹ*ತ್ಯೆಯಾಗಿರದೆ, ಗಂಭೀರ ಅಪರಾಧ ಕೃತ್ಯವಾಗಿರಬಹುದು. ಪೊಲೀಸರು ಈಗ ಎದುರಿಸುತ್ತಿರುವ ದೊಡ್ಡ ಸವಾಲು ಎಂದರೆ ವಿದ್ಯಾರ್ಥಿನಿಯ ವಿರುದ್ಧ ಈ ಅಪರಾಧ ಎಸಗಿದ ಶಂಕಿತನನ್ನು ಗುರುತಿಸುವುದು.

ಪೊಲೀಸರು ಆರಂಭಿಕ ಹಂತದಲ್ಲಿ ಸಾಕಷ್ಟು ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಲಿಲ್ಲ ಮತ್ತು ಸಕಾಲಿಕ ಹಾಗೂ ಪರಿಣಾಮಕಾರಿ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಕಂಡುಬಂದಿದೆ. ಇದರ ಆಧಾರದ ಮೇಲೆ ಇಬ್ಬರು ಅಧಿಕಾರಿಗಳನ್ನು ಸಹ ಅಮಾನತುಗೊಳಿಸಲಾಗಿದೆ.

ಜನವರಿ 9 ರಂದು ಪಾಟ್ನಾದ ಚಿತ್ರಗುಪ್ತ ನಗರದ ಶಂಭು ಬಾಲಕಿಯರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಹಲವು ದಿನಗಳ ಕಾಲ ಕೋಮಾದಲ್ಲಿದ್ದ ಆಕೆ ಜನವರಿ 11 ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನಳಾದಳು. ಆರಂಭದಲ್ಲಿ ಪೊಲೀಸರು ಇದನ್ನು ಆತ್ಮ*ಹ*ತ್ಯೆ ಪ್ರಕರಣವೆಂದು ಘೋಷಿಸಿದರು. ವಿದ್ಯಾರ್ಥಿನಿ ನಿದ್ರೆ ಮಾತ್ರೆಗಳನ್ನು ಅತಿಯಾಗಿ ಸೇವಿಸಿದ್ದಾಳೆ ಮತ್ತು ಟೈಫಾಯ್ಡ್‌ನಿಂದ ಬಳಲುತ್ತಿದ್ದಾಳೆ ಎಂದು ಹೇಳಿದರು. ಆದರೆ ಮರಣೋತ್ತರ ಪರೀಕ್ಷೆ ಮತ್ತು ಈಗ ಎಫ್‌ಎಸ್‌ಎಲ್ ವರದಿಯಿಂದ ಇಡೀ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ.
ಕುಟುಂಬದ ಆರೋಪವೇನು?
ಮೃತಳ ಕುಟುಂಬವು ಆರಂಭದಿಂದಲೂ ಅ*ತ್ಯಾ*ಚಾರ ಮತ್ತು ಕೊ*ಲೆ ಆರೋಪ ಮಾಡುತ್ತಲೇ ಬಂದಿದೆ. ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಮತ್ತು ಸಾಕ್ಷ್ಯಗಳನ್ನು ತಿರುಚಿದ್ದಾರೆ. ನಿಜವಾದ ಅಪರಾಧಿಗಳನ್ನು ರಕ್ಷಿಸಲು ತನಿಖೆಯನ್ನು ತಪ್ಪು ದಿಕ್ಕಿನಲ್ಲಿ ನಿರ್ದೇಶಿಸಲಾಗಿದೆ ಎಂದು ಕುಟುಂಬವು ಆರೋಪಿಸಿದೆ. ಇದೀಗ ಪೊಲೀಸರು ಹಾಸ್ಟೆಲ್ ಮಾಲೀಕ ಮನೀಶ್ ರಂಜನ್ ಅವರನ್ನು ಬಂಧಿಸಿದ್ದು, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಕುಟುಂಬವು ಎಸ್‌ಐಟಿಯಿಂದ ತೃಪ್ತರಾಗಿಲ್ಲ ಮತ್ತು ಸಿಬಿಐ ತನಿಖೆಗೆ ಒತ್ತಾಯಿಸುತ್ತಿದೆ.
ಪ್ರಕರಣದಲ್ಲಿ ಇಲ್ಲಿಯವರೆಗೆ ಏನಾಗಿದೆ?
*ಜನವರಿ 9 ರಂದು ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ.
*ಜನವರಿ 11 ರಂದು ಚಿಕಿತ್ಸೆಯ ಸಮಯದಲ್ಲಿ ನಿಧನ.
*ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎಂದು ಹೇಳಿಕೆ.
*ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯದ ಶಂಕೆ.
*FSL ವರದಿಯಲ್ಲಿ ಒಳುಡುಪಿನಲ್ಲಿ ವೀರ್ಯ ಇರುವುದು ಕನ್‌ಫರ್ಮ್.
*ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು.
*ಹಾಸ್ಟೆಲ್ ಮಾಲೀಕನ ಬಂಧನ
*ಎಸ್‌ಐಟಿ ರಚನೆ.
* ಸಿಬಿಐ ತನಿಖೆಗೆ ಕುಟುಂಬದಿಂದ ಒತ್ತಾಯ.
ಪಪ್ಪು ಯಾದವ್ ದಾಳಿ

ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ

TAGGED:Semen found in student's underwear; What did the FSL report say?
Share This Article
Facebook Twitter Copy Link Print
Previous Article ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ
Next Article ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?