Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ನಿಮಗೂ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ
ಪ್ರಮುಖಆರೋಗ್ಯಲೈಫ್‌ಸ್ಟೈಲ್

ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ನಿಮಗೂ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ

Share
1 Min Read
SHARE

https://youtube.com/shorts/gtZudXyWr4w?si=1g5qU5YUjZOcjpnY

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರಪಂಚದಲ್ಲಿ ಹಸಿದ ಹೊಟ್ಟೆ ಇದ್ದರೂ ನೆಮ್ಮದಿಯಾಗಿ ನಿದ್ರೆ ಮಾಡುವವರಿಗಿಂತ ಸುಖವಾದ ವ್ಯಕ್ತಿ ಬೇರೆ ಯಾರೂ ಇರಲು ಸಾಧ್ಯವಿಲ್ಲ. ರಾತ್ರಿ ಪೂರ್ತಿ ನಿದ್ರೆ ಚೆನ್ನಾಗಿ ಆದಾಗ ಮಾತ್ರ ದೇಹ ಮತ್ತು ಮನಸ್ಸು ಎರಡೂ ಉಲ್ಲಾಸದಿಂದ ಕೂಡಿರುತ್ತೆ ಎಂದು ಸಾಮಾನ್ಯವಾಗಿ ಎಲ್ಲರೂ ನಂಬುತ್ತಾರೆ, ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ ನಮ್ಮ ದೇಹ ಸ್ಪಂದಿಸುತ್ತದೆ. ಅಂದರೆ ಚೆನ್ನಾಗಿ ನಿದ್ರೆ ಮಾಡಿ ಎದ್ದಾಗಲೂ ಕೂಡ ಆಲಸ್ಯ, ತಲೆ ಭಾರವಾದಂತಹ ಅನುಭವವಾಗುತ್ತದೆ. ಇದು ದೇಹ ನಿಮಗೆ ನೀಡುತ್ತಿರುವ ಎಚ್ಚರಿಕೆಯ ಸೂಚನೆಯಾಗಿರಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರಾಧ್ಯಾಪಕ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರ ಎನಿಸುವುದಕ್ಕೆ ಮತ್ತು ಆಲಸ್ಯ ಉಂಟಾಗುವುದಕ್ಕೆ ಪ್ರಮುಖ ಕಾರಣವೆಂದರೆ ನಿದ್ರೆಯ ಗುಣಮಟ್ಟ. ತಡರಾತ್ರಿಯವರೆಗೆ ಮೊಬೈಲ್ ನೋಡುವುದು ಅಥವಾ ಟಿವಿ ನೋಡಿರುತ್ತಾರೆ. ಕೆಲವೊಮ್ಮೆ ಒತ್ತಡ ಮತ್ತು ಆತಂಕ ನಿದ್ರೆಯ ಸಮಯದಲ್ಲಿ ಮೆದುಳನ್ನು ಸಕ್ರಿಯವಾಗಿರಿಸುತ್ತದೆ, ಇದು ಬೆಳಿಗ್ಗೆ ನಿಮಗೆ ದಣಿವುಂಟು ಮಾಡುತ್ತದೆ. ಜೊತೆಗೆ ದೇಹದಲ್ಲಿ ನೀರಿನ ಕೊರತೆಯಿಂದಾಗಿ, ತಲೆ ಭಾರವಾಗಿರುತ್ತದೆ.

ಕೆಲವರು ಉಪಯೋಗ ಮಾಡುವ ದಿಂಬು ಅಥವಾ ಮಲಗುವ ಭಂಗಿ ಸರಿಯಾಗಿ ಇರುವುದಿಲ್ಲ. ಇದು ಕುತ್ತಿಗೆ ಮತ್ತು ತಲೆಯ ಸ್ನಾಯುಗಳನ್ನು ಆಯಾಸಗೊಳಿಸಬಹುದು. ಇದರ ಹೊರತಾಗಿ, ಮೂಗಿನ ದಟ್ಟಣೆ, ಸೈನಸ್ ಸಮಸ್ಯೆಗಳು ಅಥವಾ ಆಮ್ಲಜನಕದ ಕೊರತೆಯು ಸಹ ಈ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಕೆಲವು ಸಂದರ್ಭಗಳಲ್ಲಿ, ಹಾರ್ಮೋನುಗಳ ಬದಲಾವಣೆ ಕೂಡ ಈ ರೀತಿಯ ಸಮಸ್ಯೆಗೆ ಕಾರಣವಾಗಬಹುದು.

ತಡೆಯುವುದು ಹೇಗೆ?

ಪ್ರತಿದಿನ ನಿಗದಿತ ಸಮಯಕ್ಕೆ ಮಲಗಿ, ಏಳುವ ಅಭ್ಯಾಸವನ್ನು ಬೆಳೆಸಿಕೊಳ್ಳಿ.

ಮಲಗುವ ಮುನ್ನ ಮೊಬೈಲ್ ಫೋನ್ ಮತ್ತು ಪರದೆಗಳಿಂದ ದೂರವಿರಿ.

ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.

ಸಮತೋಲಿತ ಆಹಾರ ಸೇವನೆ ಮಾಡಿ.

ಮಲಗುವಾಗ ಬಳಸುವ ದಿಂಬು ಮತ್ತು ಮಲಗುವ ಭಂಗಿ ಸರಿಯಾಗಿರಲಿ.

ಒತ್ತಡವನ್ನು ಕಡಿಮೆ ಮಾಡಲು ಯೋಗ ಅಥವಾ ಧ್ಯಾನ ಮಾಡಿ.

https://www.newsics.com/2026/01/27/housewife-commits-suicide-within-two-years-of-marriage/

TAGGED:Do you feel heavy in the head even though you have slept well?
Share This Article
Facebook Twitter Copy Link Print
Previous Article ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿ ಆತ್ಮ*ಹತ್ಯೆ
Next Article ಮತ್ತೊಂದು ಎಟಿಎಂ ದರೋಡೆ : ಹಿಟಾಚಿ ಕಂಪನಿ ಸಿಬ್ಬಂದಿಯಿಂದಲೇ 1.37 ಕೋಟಿ ಲೂಟಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?