newsics.com
ಢಾಕಾ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ(Sheikh Hasina) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಅವಾಮಿ ಲೀಗ್ ಪಕ್ಷದ ನಾಯಕರೊಬ್ಬರ ಒಡೆತನದ ಹೋಟೆಲ್‌ಗೆ ಉದ್ರಿಕ್ತ ಪ್ರತಿಭಟನಾಕಾರರು ಬೆಂಕಿ ಇಟ್ಟಿದ್ದಾರೆ.
ಪರಿಣಾಮವಾಗಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರ ಗುಂಪು ಸಜೀವ ದಹನಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಭಾರತೀಯರು ಗಾಯಗೊಂಡಿದ್ದಾರೆ. ಈ ಘಟನೆಯೂ ಸೇರಿದಂತೆ ಬಾಂಗ್ಲಾದೇಶದಲ್ಲಿನ ಹಿಂಸಾಚಾರಕ್ಕೆ ಈವರೆಗೆ ಮೃತಪಟ್ಟವರ ಸಂಖ್ಯೆ 450ಕ್ಕೇರಿದೆ.
ಸ್ಥಳೀಯ ಪತ್ರಕರ್ತರು ಮತ್ತು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಸೋಮವಾರ ತಡರಾತ್ರಿ ಈ ದುರಂತ ನಡೆದಿದೆ ಎನ್ನಲಾಗಿದೆ.
ಜೋಶೋರ್ ಜಿಲ್ಲೆಯ ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಶಾಹಿನ್ ಚಕ್ಲಾದಾರ್ ಒಡೆತನದ ಜಬೀರ್ ಇಂಟರ್ನ್ಯಾಷನಲ್ ಹೋಟೆಲ್‌ಗೆ ಉದ್ರಿಕ್ತ ಗುಂಪು ಬೆಂಕಿ ಹಚ್ಚಿದೆ. ಆಗ ಹೋಟೆಲ್ ಒಳಗಿದ್ದ ಅನೇಕ ಗಣ್ಯರು ಸುಟ್ಟು ಕರಕಲಾಗಿದ್ದಾರೆ. ಇನ್ನು ಈ ಘಟನೆಯಲ್ಲಿ ಇಬ್ಬರು ಭಾರತೀಯ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
https://twitter.com/i/status/1820841278436720841
https://twitter.com/i/status/1820754316858122662
1990ರ ನಂತರ ಜನಿಸಿದವರಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚು! ಹೆಚ್ಚಾಯ್ತು ಆತಂಕ
ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!