https://youtube.com/shorts/Z7vopgc72sA?si=HaLV-YVOikNzPwcF
Subscribe ನ್ಯೂಸಿಕ್ಸ್ ಕನ್ನಡ
newsics.com
ಎರಡೇ ತಿಂಗಳಿಗೆ ಹೆಂಡತಿಯು, ಪರ ಪುರುಷನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನ ನೊಂದ ಯುವಕ ನೇಣು ಕುಣಿಕೆಗೆ ಕೊರಳೊಡ್ಡಿದ ಘಟನೆ ಮಂಗಳವಾರ ನಡೆದಿದೆ. ಇದೇ ವೇಳೆ ಮುಂದೆ ನಿಂತು ಮದುವೆ ಮಾಡಿಸಿದ್ದ ಯುವತಿಯ ಸೋದರ ಮಾವ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಸರಸ್ವತಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಮೃತ ಹರೀಶ್ ಪತ್ನಿ ಸರಸ್ವತಿಯನ್ನು ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಸರಸ್ವತಿಯನ್ನು ಬಂಧಿಸಿ ದಾವಣಗೆರೆ ಗ್ರಾಮಾಂತರ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ಅತ್ತ ಸರಸ್ವತಿ ಪ್ರಿಯಕರ ಶಿವಕುಮಾರ್ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
ಸದ್ಯ, ಇಬ್ಬರ ಸಾವಿಗೆ ಕಾರಣವಾಗಿದ್ದವಳನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಪ್ರಾಥಮಿಕ ವಿಚಾರಣೆ ನಂತರ ಮೆಡಿಕಲ್ ಚೆಕ್ ಅಪ್ ಮಾಡಿಸಿ ಬಳಿಕ ಆಕೆಯನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ.
https://www.newsics.com/2026/01/29/shruti-haasan-gets-fucked-photo-goes-viral/