https://youtube.com/shorts/Z7vopgc72sA?si=4gbyJQjGVHsXjuKq
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಈಶಾನ್ಯ ದೆಹಲಿಯ ಭಜನಪುರ ಪ್ರದೇಶದಲ್ಲಿ ಆರು ವರ್ಷದ ಬಾಲಕಿ ಮೇಲೆ ಮೂವರು ಕಿಶೋರರು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಯಸ್ಸು ಕ್ರಮವಾಗಿ 13, 14 ಮತ್ತು 15 ವರ್ಷಗಳಾಗಿದ್ದು, ಮೂವರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜನವರಿ 18ರಂದು ಬಾಲಕಿಯ ಕುಟುಂಬವು ದೂರು ದಾಖಲಿಸಿದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಆರೋಪಿಗಳು ಮತ್ತು ಬಾಲಕಿ ಒಂದೇ ಪ್ರದೇಶದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳಲ್ಲಿ ಒಬ್ಬನ ತಾಯಿ, ತನ್ನ ಮಗನನ್ನು ಸ್ವಯಂವಾಗಿ ಪೊಲೀಸರಿಗೆ ಒಪ್ಪಿಸಿದ್ದಾಳೆ. “ನನ್ನ ಮಗಳ ಸ್ಥಿತಿ ನೋಡಿದ ಬಳಿಕ ನನಗೆ ನ್ಯಾಯ ಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು,” ಎಂದು ಬಾಲಕಿಯ ತಾಯಿ ಹೇಳಿದ್ದಾರೆ.
ಪ್ರಕರಣದ ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿ, ಭಜನಪುರ ನಿವಾಸಿಗಳು ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ರಸ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೂವರು ಕಿಶೋರ ಆರೋಪಿಗಳು ಸ್ಥಳೀಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಆಶೀಷ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣಾ ಕಾಯ್ದೆ (POCSO) ಅಡಿಯಲ್ಲಿ ದಾಖಲಿಸಲಾಗಿದೆ.
ಆರೋಪಿಗಳನ್ನು ಕಿಶೋರ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿ ಅಗತ್ಯ ಸಲಹೆ ಹಾಗೂ ಆರೈಕೆ ಒದಗಿಸಲಾಗಿದೆ. ಮನೆಗೆ ಮರಳಿದ ವೇಳೆ ಬಾಲಕಿ ತೀವ್ರ ಮಾನಸಿಕ ಆಘಾತದಲ್ಲಿದ್ದಳು ಎಂದು ತಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ವಾಟ್ಸಾಪ್ ಚಾಟ್ ಲೀಕ್ ಆದ ಬೆನ್ನಲ್ಲೇ ಅಪ್ರಾಪ್ತ ಮಕ್ಕಳಿಗೆ ಮದುವೆ ಮಾಡಿದ ಪೋಷಕರು; ವೈರಲ್ ವಿಡಿಯೋ ನೋಡಿ