https://youtube.com/shorts/Z7vopgc72sA?si=3ET1oo5suVuz11Av
Subscribe ನ್ಯೂಸಿಕ್ಸ್ ಕನ್ನಡ
newsics.com
4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಲೆ ಇನ್ಸ್ ಪೆಕ್ಟರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಬಂಧಿತ ಇನ್ಸ್ ಪೆಕ್ಟರ್ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿತ ಇನ್ಸ್‌ಪೆಕ್ಟರ್‌ನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ, ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಶಾಂತಿ ಮಾತುಕತೆಗಾಗಿ ಮಾಸ್ಕೋಗೆ ಆಗಮಿಸುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ರಷ್ಯಾ ಆಹ್ವಾನ