newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಕುಸಿದುಬಿದ್ದಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಉರುಳಿದೆ.
ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಎಸ್ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಸೇತುವೆಯಿಂದ ಕಾಳಿ ನದಿಗೆ ಇನ್ನಷ್ಟು ವಾಹನಗಳು ಏನಾದರೂ ಬಿದ್ದಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಮಾಹಿತಿ ಪ್ರಕಾರ, ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಭಾರೀ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯ ಸವಾಲಿನ ಮಧ್ಯೆ ಕರಾವಳಿ ಕಾವಲು ಪಡೆ, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಕಾರ್ಯಾಚರಣೆ ಮುಂದುವರಿದಿದೆ ಎಂದು ನಾರಾಯಣ ತಿಳಿಸಿದ್ದಾರೆ.
ತಮಿಳುನಾಡು ಲಾರಿ ಚಾಲಕ ಬಾಲಮುರುಗನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಮಧ್ಯರಾತ್ರಿ ಏಕಾಏಕಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿತು. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
41 ವರ್ಷಗಳ ಹಿಂದೆ ಈ ಸೇತುವೆ ನಿರ್ಮಾಣ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು.